ಚಿಕ್ಕಮಗಳೂರುವಾಣಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಹಾಗೂ ಜಿಲ್ಲೆಯ ಕೆಲವು ಹೋಟೆಲ್, ರೆಸ್ಟೋರೆಂಟ್ ಹಾಗೂ ಕೆಫೆಗಳಲ್ಲಿ ಗೃಹ ಬಳಕೆ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.
ಹೋಟೆಲ್, ರೆಸ್ಟೋರೆಂಟ್ ಹಾಗೂ ಕೆಫೆಗಳಲ್ಲಿ ಗೃಹ ಬಳಕೆ ಸಿಲಿಂಡರ್ । ಸಿಲಿಂಡರ್ ಸ್ಫೋಟ ಪ್ರಕರಣದಿಂದ ಅನಧಿಕೃತ ಸಿಲಿಂಡರ್ ಬಳಕೆ ಬಹಿರಂಗ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುವಾಣಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಹಾಗೂ ಜಿಲ್ಲೆಯ ಕೆಲವು ಹೋಟೆಲ್, ರೆಸ್ಟೋರೆಂಟ್ ಹಾಗೂ ಕೆಫೆಗಳಲ್ಲಿ ಗೃಹ ಬಳಕೆ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.
ಇರಾನ್ ಹಾಗೂ ಇಸ್ರೇಲ್ ಯುದ್ಧದಿಂದ ದೇಶ ಹಾಗೂ ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ ಹೋಟೆಲ್, ರೆಸ್ಟೋರೆಂಟ್, ಕೆಫೆಗಳಿಗೆ ವಾಣಿಜ್ಯ ಸಿಲಿಂಡರ್ ಪೂರೈಕೆ ಬಹುತೇಕ ನಿಲ್ಲಿಸಲಾಗಿದೆ. ಹೀಗಾಗಿ, ಬಹುತೇಕ ಹೋಟೆಲ್‌ಗಳನ್ನು ಬಂದ್ ಮಾಡಲಾಗಿದೆ.ಈ ನಡುವೆ ಕೆಲವು ಹೋಟೆಲ್, ರೆಸ್ಟೋರೆಂಟ್, ಕೆಫೆ ಮಾಲೀಕರು ಗೃಹ ಬಳಕೆಯ ಕೆಂಪು ಬಣ್ಣದ 14 ಕೆ.ಜಿ. ತೂಕದ ಗ್ಯಾಸ್ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ಹೋಟೆಲ್ ರೆಸ್ಟೋರೆಂಟ್‌ಗಳಲ್ಲಿ ಬಳಕೆ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ. ಅದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಮಗಳೂರು ನಗರದಲ್ಲಿ ಹೋಟೆಲ್ ಒಂದರಲ್ಲಿ ಬಳಕೆ ಮಾಡುತ್ತಿದ್ದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ವರದಿಯಾಗಿದೆ.
ಹೋಟೆಲ್‌ನಲ್ಲಿ ಗೃಹ ಬಳಕೆ ಸಿಲಿಂಡರ್ ಸ್ಪೋಟಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯ ಉರ್ದು ಶಾಲೆ ಸಮೀಪದ ಆನಂದ್ ಕ್ಯಾಂಟೀನ್‌ನಲ್ಲಿ ಬಳಸುತ್ತಿದ್ದ ಗೃಹ ಬಳಕೆ ಸಿಲಿಂಡರ್ ಸ್ಫೋಟಗೊಂಡಿದೆ.
ಈ ಹೋಟೆಲ್ ಮಾಲೀಕ, ಒಟ್ಟು ಮೂರು ಗೃಹ ಬಳಕೆ ಸಿಲಿಂಡರ್‌ಗಳನ್ನು ಹೋಟೆಲ್‌ಗೆ ಬಳಕೆ ಮಾಡುತ್ತಿರುವುದು ಈ ವೇಳೆ ಕಂಡು ಬಂದಿದೆ.ಸ್ಫೋಟಗೊಂಡ ಸಿಲಿಂಡರ್ ಸೇರಿದಂತೆ ಎಚ್‌ಪಿ ಕಂಪನಿಗೆ ಸೇರಿದ ಮೂರು ಸಿಲಿಂಡರ್‌ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಗ್ಯಾಸ್ ಏಜೆನ್ಸಿಗೆ ಒಪ್ಪಿಸಿದ್ದಾರೆ. ಜತೆಗೆ, ಹೋಟೆಲ್ ಮಾಲೀಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.
----ಬಾಕ್ಸ್--ಅನಧಿಕೃತ ಗೃಹ ಬಳಕೆ ಸಿಲಿಂಡರ್‌ಗೆ ಕಡಿವಾಣ ಅಗತ್ಯ
ಗೃಹ ಬಳಕೆ ಸಿಲಿಂಡರ್ ಬುಕಿಂಗ್ ಅವಧಿಯಲ್ಲಿ 25 ದಿನಕ್ಕೆ ಏರಿಕೆ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ಅನ್ನು ಅನಧಿಕೃತವಾಗಿ ಬಳಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ, ಮುಂದಿನ ದಿನಗಳಲ್ಲಿ ಗೃಹ ಬಳಕೆದಾರರಿಗೆ ತೊಂದರೆ ಉಂಟಾಗಲಿದೆ. ಆಹಾರ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಸಿಲಿಂಡರ್ ಬಳಸಿ ಮಾಡುವ ಉದ್ದಿಮೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಗೃಹಿಣಿ ಮೇಘನಾ ಆಗ್ರಹಿಸಿದ್ದಾರೆ.-- ಬಾಕ್ಸ್--
ಅಡುಗೆ ಅನಿಲ ಮಿತ ಬಳಕೆಗೆ ಡಿಸಿ ಮನವಿಅಡುಗೆ ಅನಿಲವನ್ನು ಮಿತವಾಗಿ ಬಳಸುವಂತೆ ಜಿಲ್ಲಾಡಳಿತ ಸಾರ್ವಜನಿರಲ್ಲಿ ಕೋರಿದೆ.
ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಒಂದು ಗೃಹಬಳಕೆ ಸಿಲಿಂಡರನ್ನು ಬುಕ್ ಮಾಡಿದ 25 ದಿನಗಳ ಬಳಿಕವೇ ಇನ್ನೊಂದು ಸಿಲಿಂಡರ್ ಬುಕ್ ಮಾಡಲು ಅವಕಾಶವಿದೆ. ಆದ್ದರಿಂದ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಕೋರಲಾಗಿದೆ.ಸಮರ್ಪಕ ಪೂರೈಕೆಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸ ಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿ ನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡುತ್ತಾರೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಹಾಗಾಗಿ, ಸಾರ್ವಜನಿಕರು ಯಾವುದೇ ರೀತಿ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯುವಂತೆ ವಿನಂತಿಸಲಾಗಿದೆ. ಎಲ್‌ಪಿಜಿ ವಿತರಣೆಯಲ್ಲಿ ಸಮಸ್ಯೆ ಕಂಡುಬಂದಲ್ಲಿ 08262-237715 ಹಾಗೂ 9483325944 ಈ ದೂರವಾಣಿ ಸಂಖ್ಯೆಗಳಿಗೆ ಬೆಳಗ್ಗೆ 10 ರಿಂದ ಸಂಜೆ 5ರ ಅವಧಿಯಲ್ಲಿ ಕರೆ ಮಾಡ ಬಹುದು.ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಹಾಗೂ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯೂಲೇಷನ್ ಆಫ್ ಸಫ್ಟ್ ಅಂಡ್ ಡಿಸ್ಟ್ರಿಬ್ಯೂಷನ್) ಆರ್ಡರ್ 2000ರನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಫೋಟೋಚಿಕ್ಕಮಗಳೂರಿನಲ್ಲಿ ಶುಕ್ರವಾರ ಹೋಟೆಲ್‌ನಲ್ಲಿ ಸ್ಫೋಟಗೊಂಡ ಗೃಹ ಬಳಕೆ ಸಿಲಿಂಡರ್ ವಶಕ್ಕೆ ಪಡೆದ ಆಹಾರ ಇಲಾಖೆ ಅಧಿಕಾರಿಗಳು.