ಅಕ್ರಮ ಮರಳುಗಾರಿಕೆ: ಬೋಟ್‌, ಮರಳು ವಶಕ್ಕೆ

| Published : Nov 07 2024, 11:53 PM IST

ಅಕ್ರಮ ಮರಳುಗಾರಿಕೆ: ಬೋಟ್‌, ಮರಳು ವಶಕ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮರಳುಗಾರಿಕೆಗೆ ಬಳಸಲಾಗುತ್ತಿದ್ದ ಬೋಟುಗಳನ್ನು ವಶಕ್ಕೆ ಪಡೆದಿದ್ದು ಇವುಗಳ ಮೌಲ್ಯ 6 ಲಕ್ಷ ರು. ಹಾಗೂ ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ 25,000 ರು. ಎಂದು ಅಂದಾಜಿಸಲಾಗಿದೆ.

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಸ್ಥಳಕ್ಕೆ ಗಣಿ ಇಲಾಖೆ ದಾಳಿ ನಡೆಸಿದ್ದು ಮರಳುಗಾರಿಕೆಗೆ ಬಳಸುತ್ತಿದ್ದ 4 ಬೋಟ್ ಹಾಗೂ ಸಂಗ್ರಹಿಸಿಟ್ಟಿದ್ದ ಮರಳನ್ನು ವಶಕ್ಕೆ ಪಡೆದಿದೆ.

ಗಣಿ ಇಲಾಖೆಯ ಗಿರೀಶ್ ಮೋಹನ್ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿದ ವೇಳೆ ಸ್ಥಳದಲ್ಲಿ ಮರಳುಗಾರಿಕೆ ನಡೆಯುತ್ತಿರುವ ಕುರುಹುಗಳು ಕಂಡುಬಂದಿದ್ದು ಮರಳುಗಾರಿಕೆಗೆ ಬಳಸಲಾಗುತ್ತಿದ್ದ ಬೋಟುಗಳನ್ನು ವಶಕ್ಕೆ ಪಡೆದಿದ್ದು ಇವುಗಳ ಮೌಲ್ಯ 6 ಲಕ್ಷ ರು. ಹಾಗೂ ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ 25,000 ರು. ಎಂದು ಅಂದಾಜಿಸಲಾಗಿದೆ.

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ, ಧರ್ಮಸ್ಥಳ ವಿಎ ಪ್ರದೀಪ್ ಕುಮಾರ್, ಗ್ರಾಮ ಸಹಾಯಕ ಹರೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

----ವಿಷ ಪದಾರ್ಥ ಸೇವಿಸಿ ಯುವಕ ಆತ್ಮಹತ್ಯೆ

ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.