ಅಕ್ರಮ ಮರಳು ದಂಧೆಯ ಕುರಿತು ನಾವು ಪರಿಶೀಲನೆಗೆ ಹೋಗುತ್ತಿದ್ದಂತೆ ಅಲ್ಲಿಯೇ ಕೆಲ ಪೊಲೀಸರು ಮಾರುವೇಷದಲ್ಲಿರುವುದು ಕಂಡು ಬಂದಿದೆ
ಕೊಪ್ಪಳ: ಜಿಲ್ಲಾದ್ಯಂತ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಿಪ ಸದಸ್ಯೆ ಹೇಮಲತಾ ನಾಯಕ ಹೇಳಿದ್ದಾರೆ.
ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ನಾವು ಮನವಿ ಮಾಡಿದಾಗ ಅಲ್ಪಮಟ್ಟಿಗೆ ನಿಯಂತ್ರ ಮಾಡಲಾಯಿತು. ಆದರೆ, ಅದಾದ ನಂತರ ಮತ್ತೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದಕ್ಕೆ ಯಾರು ಕಡಿವಾಣ ಹಾಕುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಕ್ರಮ ಮರಳು ದಂಧೆಯ ಕುರಿತು ನಾವು ಪರಿಶೀಲನೆಗೆ ಹೋಗುತ್ತಿದ್ದಂತೆ ಅಲ್ಲಿಯೇ ಕೆಲ ಪೊಲೀಸರು ಮಾರುವೇಷದಲ್ಲಿರುವುದು ಕಂಡು ಬಂದಿದೆ. ಅವರೇ ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಮರಳು ದಂಧೆಯ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಂತೆ ಇದರ ಮಾಹಿತಿ ಅಲ್ಲಿರುವ ಪೊಲೀಸ್ ಸಿಬ್ಬಂದಿ ಅಥವಾ ಇನ್ಯಾರೋ ಮಾಹಿತಿ ನೀಡುತ್ತಿದ್ದಾರೆ. ಹೀಗಾಗಿ, ಅಕ್ರಮ ಮರಳು ದಂಧೆಯ ವಿರುದ್ಧ ಧ್ವನಿ ಎತ್ತುವುದನ್ನು ತಡೆಯುವ ಕುತಂತ್ರವೂ ನಡೆದಿದೆ ಎಂದರು.ಹಿರೇಸಿಂದೋಗಿ ಬಳಿ ಅಕ್ರಮ ಮರಳು ದಂಧೆಯ ಕುರಿತು ದೂರು ನೀಡಿದ ಅಗತ್ಯ ಅಕ್ರಮ ವಹಿಸಿದ್ದರು. ಆಗ ತುರ್ತು ಕ್ರಮಕೈಗೊಂಡಿದ್ದರು. ಅದಾದ ಮೇಲೆ ಅದನ್ನು ನಿಯಂತ್ರಣ ಮಾಡುವಲ್ಲಿ ಮತ್ತೆ ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಸರ್ಕಾರದಲ್ಲಿ ಪ್ರಭಾವಿಯಾಗಿದ್ದಾರೆ ಅನಿಸುತ್ತಿದೆ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅಕ್ರಮ ಮರಳು ದಂಧೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರ ವಿರುದ್ಧ ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ ಎಂದರು.ಹಿರಿಯ ಭೂ ವಿಜ್ಞಾನಿ ಪುಷ್ಪಾವತಿಯ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮ ಅನುಮಾನ ಬರುವಂತೆ ಮಾಡಿದೆ. ಕಳೆದ ತಿಂಗಳು ದೂರು ನೀಡಿದ ಹಿನ್ನೆಲೆಯಲ್ಲಿ ಸ್ವಲ್ಪ ದಿನ ಬಂದ್ ಆಗಿತ್ತು, ಆಗ 69 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು, ಆದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಶಾಸಕರ ಬೆಂಬಲಿಗರು ಅಕ್ರಮ ಮರಳು ದಂಧೆ ನಡೆಸುತ್ತಾರೆ ಎನ್ನುವ ಆರೋಪವಿದ್ದು, ಈ ಕಾರಣಕ್ಕಾಗಿಯೇ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ ಎಂದು ಆರೋಪಿಸಿದರು.
ಸರ್ಕಾರಕ್ಕೆ ರಾಜ್ಯಸ್ವ ಪಾವತಿಸದೆ ನೂರಾರು ಲಾರಿಗಳಲ್ಲಿ ಮರಳು ಸಾಗಾಟ ಮಾಡಲಾಗುತ್ತಿದೆ. ಈ ಕುರಿತು ವಿಧಾನಪರಿಷತ್ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಹೇಮಲತಾ ನಾಯಕ ಹೇಳಿದರು.ಮೆಕ್ಕೆಜೋಳ ದರ ಕುಸಿತವಾಗಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ ಬೆಂಬಲ ಬೆಲೆ ದರದಲ್ಲಿ ಖರೀದಿ ಮಾಡಲು ಬೆಂಬಲ ಬೆಲೆ ಕೇಂದ್ರ ತೆರೆಯುತ್ತಿಲ್ಲ ಎಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯ ಡಾ. ಬಸವರಾಜ ಕ್ಯಾವಟರ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಪಕ್ಷವೂ ಈ ದಿಸೆಯಲ್ಲಿ ಹೋರಾಟ ಮಾಡಿದೆ, ರೈತ ಸಂಘಟನೆಗಳು ಹೋರಾಟ ಮಾಡಿವೆ. ಆದರೂ ರಾಜ್ಯ ಸರ್ಕಾರ ಎಚ್ಚೆತ್ತುಗೊಂಡು ರೈತರ ನೆರವಿಗೆ ಬರುತ್ತಿಲ್ಲ ಎಂದು ಅಪಾದಿಸಿದರು.ಕಂಠಯ್ಯ ಹಿರೇಮಠ ಹಾಗೂ ಗಣೇಶ ಹೊರತಟ್ನಾಳ ಇದ್ದರು.