ಸಾರಾಂಶ
ನಗರಂಗೆರೆ ಗ್ರಾಮದಿಂದ ಟಿಪ್ಪರ್‌ನಲ್ಲಿ ಮರಳು ಕಳ್ಳತನದಿಂದ ಸಾಗಾಣಿಕೆ ಮರಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚಳ್ಳಕೆರೆ: ಸರ್ಕಾರದ ಅನುಮತಿ ಇಲ್ಲದೆ ಕಾನೂನು ಬಾಹಿರವಾಗಿ ಮರಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಠಾಣಾ ಇನ್ಸ್‌ಪೆಕ್ಟರ್ ಕೆ.ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿ, ಡಿವೈಎಸ್ಪಿ ಟಿ.ಬಿ.ರಾಜಣ್ಣನವರ ಆದೇಶದಂತೆ ನಗರಂಗೆರೆ ಗ್ರಾಮದಿಂದ ಟಿಪ್ಪರ್‌ನಲ್ಲಿ ಮರಳು ಕಳ್ಳತನದಿಂದ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಟಿಪ್ಪರ್ ಲಾರಿಯಲ್ಲಿ ಮರಳು ತುಂಬಿದ್ದು, ಈ ಬಗ್ಗೆ ದಾಖಲಾತಿ ಕೇಳಿದಾಗ ಚಾಲಕ ಮಾಲೀಕರ ಸೂಚನೆಯಂತೆ ಮರಳನ್ನು ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದ ಕೂಡಲೇ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.ಸಾರ್ವಜನಿಕರು ಮರಳು ಅಕ್ರಮ ಸಾಗಾಟ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕಿದ್ದು, ಸಾರ್ವಜನಿಕರೂ ಸಹ ಇಲಾಖೆಯೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
;Resize=(128,128))
;Resize=(128,128))
;Resize=(128,128))