ಕಲಾದಗಿ: ವ್ಯಕ್ತಿಯೋರ್ವ ತನ್ನ ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಚೀಲಗಳ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು, ಅಕ್ರಮ ದಾಸ್ತಾನು ಮಾಡಿದ ಆರೋಪಿಯ ಮೇಲೆ ಇಲ್ಲಿನ ಪೋಲಿಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಗ್ರಾಮದ ಬಸೀರಹ್ಮದ ಬಾ, ಬೇಪಾರಿ ಎಂಬಾತನೇ ಆರೋಪಿ. ಈತ ತನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದ 31 ಪಡಿತರ ಅಕ್ಕಿಯ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಹಾರ ಇಲಾಖೆಯ ನಿರೀಕ್ಷಕ ಪ್ರಕಾಶ ಶೇರಖಾನೆ ಅವರು ನೀಡಿರುವ ದೂರಿನನ್ವಯ ಇಲ್ಲಿನ ಪೊಲೀಸ್ ಠಾಣೆಯ ಎಎಸ್‍ಐ ಎ.ಎ.ಬೈಗನಪಲ್ಲಿ ದೂರನ್ನು ದಾಖಲಿಸಿಕೊಂಡಿದ್ದಾರೆ.