10ಕೆಎಂಎನ್ ಡಿ19ಅಕ್ರಮವಾಗಿ ಕಲ್ಲು ಸಾಗಣಿಕೆ ಮಾಡುತ್ತಿದ್ದ ನಾಲ್ಕು ಟ್ರ್ಯಾಕ್ಟರನ್ನು ವಶಕ್ಕೆ ಪಡೆದಿರುವ ಅರಣ್ಯ ಸಿಬ್ಬಂದಿಗಳು. | Kannada Prabha
Image Credit: KP
ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಲ್ಲು ಸಾಗಣಿಕೆ ಮಾಡುತ್ತಿದ್ದ ನಾಲ್ಕು ಟ್ರ್ಯಾಕ್ಟರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಶ್ರೀರಂಗಪಟ್ಟಣ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಲ್ಲು ಸಾಗಣಿಕೆ ಮಾಡುತ್ತಿದ್ದ ನಾಲ್ಕು ಟ್ರ್ಯಾಕ್ಟರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಮುಂಡುಗದೊರೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಸಾಗಾಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಬ್ಬಂದಿ 4 ಟ್ರ್ಯಾಕ್ಟರ್ ಹಾಗೂ ಚಾಲಕರನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಪ್ರದೇಶ ಸೇರಿದಂತೆ ಇತರೆ ಸ್ಥಳಗಳಲ್ಲಿ ಮತ್ತೆ ಕಲ್ಲು ಕ್ವಾರೆ ಕ್ರಷರ್‌ಗಳು ಎಗ್ಗಿಲ್ಲದೆ ನಡೆಯುತ್ತಿವೆ. ಕಲ್ಲು ಬಂಡೆಗಳನ್ನು ಸಿಡಿಸಲು ಬ್ಲಾಂಸ್ಟಿಂಗ್ ಮಾಡುತ್ತಿದ್ದಾರೆ. ಜನ-ಜಾನುವಾರುಗಳು ಸೇರಿದಂತೆ ಗ್ರಾಮಸ್ಥರು ಆತಂಕದಲ್ಲಿ ದಿನ ದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಎಆರ್‌ಎಫ್‌ಒ ಆನಂದೇಗೌಡ ಪ್ರತಿಕ್ರಿಯಿಸಿ, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಸಾಗಾಣಿಕೆ ಮಾಡುತ್ತಿದ್ದ 4 ಟ್ರ್ಯಾಕ್ಟರ್ ಹಾಗೂ ಡ್ರೈವರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಗೌಡಹಳ್ಳಿ-ಗಣಂಗೂರು ಬಳಿಯ ಅರಣ್ಯ ಪ್ರದೇಶಗಳಲ್ಲಿ ವಾಹನಗಳನ್ನು ಸೀಜ್ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.