ಸಾರಾಂಶ
ಆನಂದಪುರ: ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳನ್ನು ಸಾಗಿಸುತ್ತದ್ದ ವ್ಯಕ್ತಿಯನ್ನು ಮಾಲು ಸಮೇತ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ನಡೆದಿದೆ.
ಆನಂದಪುರ: ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳನ್ನು ಸಾಗಿಸುತ್ತದ್ದ ವ್ಯಕ್ತಿಯನ್ನು ಮಾಲು ಸಮೇತ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ನಡೆದಿದೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪದ ಲೋಕೇಶ್ ಬಂಧಿನ ಆರೋಪಿ. ಬಂಧಿತನಿಂದ ಚಿರತೆಯ 16 ಉಗುರು, 3 ಹಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ.ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳ ಉಗುರು ಹಲ್ಲು ಹಾಗೂ ಚರ್ಮವನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲದ ಮೇಲೆ ಪೊಲೀಸ್, ಅರಣ್ಯ ಸಂಚಾರಿ ದಳ ಸಂಚು ನಡೆಸುತ್ತಿತ್ತು. ಮಡಿಕೇರಿಯ ಎಸ್‌ಪಿ, ಎಸ್.ಎಸ್.ಕಾಶಿ ಸಿಐಡಿ ಅರಣ್ಯ ಘಟಕ ಇವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿಯೊಂದಿಗೆ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಸಬ್‌ಇನ್ಸ್‌ಪೆಕ್ಟರ್ ಕೆ.ವಿನಾಯಕ ಇವರ ನೇತೃತ್ವದಲ್ಲಿ ಆನಂದಪುರ ಸಮೀಪದ ದಾಸಕೊಪ್ಪ ಸರ್ಕಲ್‌ನ ಪೆಟ್ರೋಲ್ ಬಂಕ್ ಸಮೀಪ ಚಿರತೆ ಉಗುರು ಮತ್ತು ಹಲ್ಲುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲೋಕೇಶ್ ಎಂಬಾತನನ್ನು ಪೊಲೀಸ್ ಅರಣ್ಯ ಸಂಚಾರದಳ ಬಂಧಿಸಿದ್ದು, ಈತನ ಬಳಿ ಇದ್ದ ಚಿರತೆಯ 16 ಉಗುರು, 3 ಹಲ್ಲುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳಾದ ಗಣೇಶ್, ವಿಶ್ವನಾಥ್, ಆಂಜನೇಯ, ದಿನೇಶ್, ಪ್ರಮೋದ್ ಕುಮಾರಿ, ಈ ದಾಳಿಯಲ್ಲಿ ಭಾಗವಹಿಸಿದ್ದರು. ಬಂಧಿತ ಆರೋಪಿಯ ವಿರುದ್ಧ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳ ಪ್ರಕರಣವನ್ನು ದಾಖಲಿಸಿದ್ದು, ಆರೋಪಿ ಲೋಕೇಶ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ತಿಳಿದು ಬಂದಿದೆ.