ಆಟೋದಲ್ಲಿ ಅಕ್ರಮವಾಗಿ ಗೋ ಸಾಗಾಟ: ಪೊಲೀಸರಿಗೊಪ್ಪಿಸಿದ ಬಜರಂಗ ದಳ ಕಾರ್ಯಕರ್ತರು

| Published : Oct 17 2024, 12:00 AM IST

ಆಟೋದಲ್ಲಿ ಅಕ್ರಮವಾಗಿ ಗೋ ಸಾಗಾಟ: ಪೊಲೀಸರಿಗೊಪ್ಪಿಸಿದ ಬಜರಂಗ ದಳ ಕಾರ್ಯಕರ್ತರು
Share this Article
  • FB
  • TW
  • Linkdin
  • Email

ಸಾರಾಂಶ

ಬಜರಂಗದಳದ ಕಾರ್ಯಕರ್ತರು ಆಟೋವನ್ನು ತಡೆದು ಪುತ್ತೂರು ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಚಾಲಕನ ಸಹಿತ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡರು.

ಕನ್ನಡಪ್ರಭ ವಾರ್ತೆ ಪುತ್ತೂರು

ಆಟೋವೊಂದರಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದು ಬುಧವಾರ ಮಧ್ಯಾಹ್ನ ಪುತ್ತೂರು ನಗರದ ಬೈಪಾಸ್ ರಸ್ತೆಯಲ್ಲಿನ ಪರ್ಲಡ್ಕ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಅರಿತ ಬಜರಂಗದಳದ ಕಾರ್ಯಕರ್ತರು ಆಟೋವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರದ ದರ್ಬೆಯಿಂದ ಬೈಪಾಸ್ ರಸ್ತೆಯ ಮೂಲಕ ನೆಹರೂ ನಗರದ ಕಡೆಗೆ ಗೋವನ್ನು ಅಕ್ರಮವಾಗಿ ಆಟೋದಲ್ಲಿ ಸಾಗಿಸಲಾಗುತ್ತಿತ್ತು. ಅಟೋದಲ್ಲಿ ಚಾಲಕನ ಸಹಿತ ಮಹಿಳೆಯರಿಬ್ಬರು ಪ್ರಯಾಣಿಸುತ್ತಿದ್ದರು. ಅವರ ಕಾಲಿನ ಬಳಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಿಸಲಾಗುತ್ತಿತ್ತು. ಬಜರಂಗದಳದ ಕಾರ್ಯಕರ್ತರು ಆಟೋವನ್ನು ತಡೆದು ಪುತ್ತೂರು ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಚಾಲಕನ ಸಹಿತ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡರು.