ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಮನೆಯಲ್ಲಿಯೇ ಇದ್ದ ಕಟ್ಟಿಗೆ ಮಣಿ, ಕಬ್ಬಿಣದ ರಾಡು ಮತ್ತು ಬಡಿಗೆಯಿಂದ ಹಲ್ಲೆ ನಡೆಸಿದ್ದು, ಈ ವೇಳೆ ತೀವ್ರವಾಗಿ ಗಾಯಗೊಂಡ ಯುವಕ ಈರಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.
ಲಕ್ಷ್ಮೇಶ್ವರ: ಸಮೀಪದ ಪು.ಬಡ್ನಿ ಗ್ರಾಮದಲ್ಲಿ ಬುಧವಾರ ರಾತ್ರಿ ಓರ್ವ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಈರಣ್ಣ ಷಣ್ಮುಖಪ್ಪ ಅಗಸಿಬಾಗಿಲ(೩೪) ಎಂದು ಗುರುತಿಸಲಾಗಿದ್ದು, ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಬುಧವಾರ ರಾತ್ರಿ ಯುವಕನ ಮನೆಯಂಗಳದಲ್ಲಿಯೇ ಬಡಿಗೆ ಹಾಗೂ ಕಟ್ಟಿಗೆ ಮಣಿಯಿಂದ ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.
ಮೃತ ಯುವಕ ಕುರಿ ಕಾಯುತ್ತಿದ್ದು, ಗ್ರಾಮದ ಯುವತಿಯೋರ್ವಳೊಂದಿಗೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣವೆಂಬ ಶಂಕೆ ಬಲವಾಗಿದೆ. ಇದೇ ವಿಷಯವಾಗಿ ಎರಡು ವರ್ಷಗಳ ಹಿಂದೆ ಗ್ರಾಮದ ಹಿರಿಯರು ರಾಜಿ ಮಾಡಿಸಿದ್ದರು ಎನ್ನಲಾಗಿದೆ.ಬುಧವಾರ ರಾತ್ರಿ ೯ ಗಂಟೆ ಸುಮಾರಿಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಗಂಡ ಹಾಗೂ ಆತನ ಸಂಬಂಧಿಕರು ಮೃತ ಯುವಕ ಈರಣ್ಣನ ಮನೆಗೆ ತೆರಳಿ ಜಗಳ ಆರಂಭಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಮನೆಯಲ್ಲಿಯೇ ಇದ್ದ ಕಟ್ಟಿಗೆ ಮಣಿ, ಕಬ್ಬಿಣದ ರಾಡು ಮತ್ತು ಬಡಿಗೆಯಿಂದ ಹಲ್ಲೆ ನಡೆಸಿದ್ದು, ಈ ವೇಳೆ ತೀವ್ರವಾಗಿ ಗಾಯಗೊಂಡ ಯುವಕ ಈರಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿಗಳು ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ.
ವಿಷಯ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಹಾಗೂ ಡಿವೈಎಸ್‌ಪಿ, ಸಿಪಿಐ, ಪಿಎಸ್‌ಐ, ಕ್ರೈಂ ವಿಭಾಗದ ಪಿಎಸ್‌ಐ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಲೀಕರ ಚಿನ್ನ ಕದ್ದ ಮನೆಗೆಲಸದ ಮಹಿಳೆ ಬಂಧನಗದಗ: ಬರೋಬ್ಬರಿ 12 ವರ್ಷಗಳಿಂದ ಮನೆಕೆಲಸ ಮಾಡಿಕೊಂಡು ಮನೆ ಮಾಲೀಕರ ವಿಶ್ವಾಸ ಗಳಿಸಿದ್ದ ಮಹಿಳೆಯೇ ಮನೆಯಲ್ಲಿದ್ದ ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಮುಂಡರಗಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ.ಪ್ರಕರಣ ದಾಖಲಾದ ಕೇವಲ 8 ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವ ಪೊಲೀಸರು, ಆಕೆಯಿಂದ ₹14.80 ಲಕ್ಷ ಮೌಲ್ಯದ 185 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಮುಂಡರಗಿ ಪಟ್ಟಣದ ಅನ್ನದಾನೇಶ್ವರ ನಗರದ ನಿವಾಸಿ ಹಾಗೂ ಶಿಕ್ಷಣ ಇಲಾಖೆಯ ಎಫ್‌ಡಿಎ ಆಗಿರುವ ವಸಂತ ಮೊರಬ ಅವರ ಮನೆಯಲ್ಲಿ ಚಿನ್ನಾಭರಣ ಕಳವು ನಡೆದಿತ್ತು. ಈ ಕುರಿತು ಆ. 26ರಂದು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ, ಆರೋಪಿಯ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರ ಸೂಚನೆಯಂತೆ ವಿಶೇಷ ತಂಡ ರಚಿಸಲಾಗಿತ್ತು. ನರಗುಂದ ಉಪವಿಭಾಗದ ಡಿವೈಎಸ್‌ಪಿ ಪ್ರಭುಗೌಡ ಕಿರೇದಳ್ಳಿ ಅವರ ಮಾರ್ಗದರ್ಶನದಲ್ಲಿ ಮುಂಡರಗಿ ಠಾಣೆ ಇನ್‌ಸ್ಪೆಕ್ಟರ್ ಅಯ್ಯನಗೌಡ ಪಾಟೀಲ, ಪಿಎಸ್‌ಐ ಬಿ.ಎನ್. ಯಳವತ್ತಿ ಹಾಗೂ ಅಪರಾಧ ದಳದ ಸಿಬ್ಬಂದಿ ತನಿಖೆ ನಡೆಸಿದರು.ತನಿಖೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡರಗಿ ಎ.ಡಿ. ನಗರದ ನಿವಾಸಿ ಲಲಿತಾ ಈರಪ್ಪ ಗೊಂಡಬಾಳ(47) ಎಂಬಾಕೆಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಕರಣವನ್ನು ತ್ವರಿತವಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಎಸ್ಪಿ ರೋಹನ್ ಜಗದೀಶ್ ಮೆಚ್ಚುಗೆ ವ್ಯಕ್ತಪಡಿಸಿ ನಗದು ಬಹುಮಾನ ಘೋಷಿಸಿದ್ದಾರೆ.