ಗಾಂಧೀಜಿ, ಶಾಸ್ತ್ರಿ ತತ್ವಾದರ್ಶ ಮೈಗೂಡಿಸಿಕೊಳ್ಳಿ: ಪಟೇಲ್ ರಾಜು

| Published : Oct 03 2025, 01:07 AM IST

ಗಾಂಧೀಜಿ, ಶಾಸ್ತ್ರಿ ತತ್ವಾದರ್ಶ ಮೈಗೂಡಿಸಿಕೊಳ್ಳಿ: ಪಟೇಲ್ ರಾಜು
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಸುಭದ್ರವಾದ ದೇಶ ನಿರ್ಮಾಣ ಸಾಧ್ಯವಾಗಲಿದೆ ಎಂದು ಪಟೇಲ್ ಆಂಗ್ಲ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಪಟೇಲ್ ಸಿ.ರಾಜು ಹೇಳಿದರು

ರಾಮನಗರ: ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಸುಭದ್ರವಾದ ದೇಶ ನಿರ್ಮಾಣ ಸಾಧ್ಯವಾಗಲಿದೆ ಎಂದು ಪಟೇಲ್ ಆಂಗ್ಲ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಪಟೇಲ್ ಸಿ.ರಾಜು ಹೇಳಿದರು.

ನಗರದ ಕೆಂಪೇಗೌಡ ಸರ್ಕಲ್ ಹತ್ತಿರ ಮಾಗಡಿ ರಸ್ತೆಯಲ್ಲಿರುವ ಪಟೇಲ್ ಆಂಗ್ಲ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಈ ನಾಯಕರು ತೋರಿಸಿದ ಭ್ರಷ್ಟಾಚಾರ ಹಾಗೂ ಲಂಚಗುಳಿತನದಿಂದ ಹೇಗೆ ದೇಶವನ್ನು ಮುನ್ನಡೆಸಿದರು ಎಂಬುದನ್ನು ಮನಗಂಡು ನಡೆದುಕೊಳ್ಳಬೇಕು ಎಂದು ಹೇಳಿದರು.

ನಮ್ಮದು ಹಳ್ಳಿಗಳ ದೇಶ. ಪ್ರತಿಯೊಂದು ಹಳ್ಳಿಗಳು ಗ್ರಾಮ ಸಭೆಯ ಮೂಲಕ ತಮ್ಮ ಊರಿನ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಒಂದು ರೈತ ಕುಟುಂಬ ಸುಭಿಕ್ಷವಾಗಿ ಇರಬೇಕಾದರೆ ಸಾಮಾನ್ಯವಾಗಿ ಯಾವುದೇ ವ್ಯಾಜ್ಯಗಳಿಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ಹಾಗೂ ನ್ಯಾಯಾಲಯದ ಮೆಟ್ಟಿಲನ್ನು ಹತ್ತಬಾರದು.

ಗ್ರಾಮದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸಿಕೊಂಡು ನೆಮ್ಮದಿಯಾಗಿರಬೇಕು. ಈ ವ್ಯವಸ್ಥೆಯಿಂದ ಕುಟುಂಬ ಪದ್ಧತಿ ಬಲಗೊಳ್ಳುತ್ತದೆ ಮತ್ತು ವೈವಾಹಿಕ ಜೀವನ ಉತ್ತಮ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರು ಸಿಬ್ಬಂದಿ ವರ್ಗ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.2ಕೆಆರ್ ಎಂಎನ್ 4.ಜೆಪಿಜಿ

ರಾಮನಗರದ ಕೆಂಪೇಗೌಡ ಸರ್ಕಲ್ ಹತ್ತಿರ ಮಾಗಡಿ ರಸ್ತೆಯಲ್ಲಿರುವ ಪಟೇಲ್ ಆಂಗ್ಲ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.