ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ತರಬೇತಿ ಮತ್ತು ಉದ್ಯೋಗ ಕೋಶ ಬುಧವಾರ ಆಯೋಜಿಸಿದ್ದ ಕ್ಯಾಂಪಸ್ ನೇಮಕಾತಿಯಲ್ಲಿ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು ಇಂಟರ್ನ್‌ಶಿಪ್ ಸಹಿತ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಕ್ಯೂಸ್ಪೈಡರ್ಸ್, ಪ್ರೋಸ್ಪೈಡರ್ಸ್ ಮತ್ತು ಜಿಕ್ಯೂಟಿ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಸಿಎ, ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆಪ್ಟಿಟ್ಯೂಡ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಮುಖಾಮುಖಿ ಸಂದರ್ಶನ ಸೇರಿದಂತೆ ಮೂರು ಹಂತದ ನೇಮಕಾತಿ ಪ್ರಕ್ರಿಯೆ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.
ಶೈಕ್ಷಣಿಕ ಹಂತದ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಉದ್ಯಮ ಪರಿಚಯ ಮತ್ತು ಪ್ರಾಯೋಗಿಕ ಅನುಭವ ದೊರಕಿಸುವ ಉದ್ದೇಶದಿಂದ ಈ ಅಭಿಯಾನವನ್ನು ಆಯೋಜಿಸಲಾಗಿತ್ತು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದ ಅಭಿನಂದಿಸಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತರಬೇತಿ ಮತ್ತು ಉದ್ಯೋಗ ಕೋಶ ವಹಿಸುತ್ತಿರುವ ಪಾತ್ರವನ್ನು ಪ್ರಾಂಶುಪಾಲರು ಶ್ಲಾಘಿಸಿದರು. ದ್ವಿತೀಯ ವರ್ಷದಲ್ಲೇ ಇಂಟರ್ನ್‌ಶಿಪ್ ಸಹಿತ ಉದ್ಯೋಗಾವಕಾಶ ಪಡೆದಿರುವುದು ವಿದ್ಯಾರ್ಥಿಗಳ ಕೌಶಲ್ಯ ಮತ್ತು ಕಾಲೇಜು ನೀಡುತ್ತಿರುವ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.ಐಎಂಜೆಐಎಸ್ಸಿ: ದ್ವಿತೀಯ ವರ್ಷದ 30 ವಿದ್ಯಾರ್ಥಿಗಳಿಗೆ ಉದ್ಯೋಗ
ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ತರಬೇತಿ ಮತ್ತು ಉದ್ಯೋಗ ಕೋಶ ಬುಧವಾರ ಆಯೋಜಿಸಿದ್ದ ಕ್ಯಾಂಪಸ್ ನೇಮಕಾತಿಯಲ್ಲಿ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು ಇಂಟರ್ನ್‌ಶಿಪ್ ಸಹಿತ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.