ಐಎಂಜೆಐಎಸ್‌ಸಿ: ಶಿಕ್ಷಕರಿಗಾಗಿ ವೃತ್ತಿ ಕಾರ್ಯಾಗಾರ ಸಂಪನ್ನ

| Published : Aug 11 2024, 01:32 AM IST

ಸಾರಾಂಶ

ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಶಿಕ್ಷಕರ ಕಾರ್ಯಕ್ಷಮತೆಯನ್ನು ಉನ್ನತಿಗೊಳಿಸುವುದಕ್ಕೆ ‘ಶಿಕ್ಷಕರಾಗಿ ನಮ್ಮ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಪೋಷಿಸುವುದು’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಶಿಕ್ಷಕರ ಕಾರ್ಯಕ್ಷಮತೆಯನ್ನು ಉನ್ನತಿಗೊಳಿಸುವುದಕ್ಕೆ ‘ಶಿಕ್ಷಕರಾಗಿ ನಮ್ಮ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಪೋಷಿಸುವುದು’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.ಐಎಂಜೆ ಸಂಸ್ಥೆಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗಡೆ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ನಂತರ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಕರು ನಿಷ್ಠೆ ಮತ್ತು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಿ, ತಮ್ಮ ಜ್ಞಾನ ಭಂಡಾರವನ್ನು ವಿಸ್ತರಿಸಿ, ವಿದ್ಯಾರ್ಥಿ ಮತ್ತು ಸಂಸ್ಥೆಗಾಗಿ ಕೆಲಸ ನಿರ್ವಹಿಸಬೇಕು. ಶಿಕ್ಷಕ ಹೇಗೆ ತನ್ನ ಕಾರ್ಯದಕ್ಷತೆಯನ್ನು ಹೆಚ್ಚಿಸಬಹುದು ಎಂಬುದನ್ನು ತನ್ನ ಅನುಭವ ಮತ್ತು ಉದಾಹರಣೆಗಳ ಮೂಲಕ ತಿಳಿಸಿದರು.ಸಂಸ್ಥೆಯ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ. ಪಟೇಲ್ ಹಾಗೂ ಉಪ ಪ್ರಾಂಶುಪಾಲರಾದ ಜಯಶೀಲ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಣಿತಶಾಸ್ತ್ರ ಉಪನ್ಯಾಸಕಿ ರಕ್ಷಿತಾ ಆರ್. ಅಡಿಗ ನಿರೂಪಿಸಿದರು.