ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್‌ಸಿ) ತೃತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಕುಮಿಟೆ - 67 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್‌ಸಿ) ತೃತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಕುಮಿಟೆ - 67 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಚಾಂಪಿಯನ್‌ಶಿಪ್‌ನಲ್ಲಿ ಅಬ್ದುಲ್ ಮಲ್ಲಿಕ್ ಅವರು ಪ್ರಭಾವಶಾಲಿ ಪ್ರದರ್ಶನ ನೀಡಿ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರ ಈ ಸಾಧನೆಗಾಗಿ ಐಎಂಜೆಐಎಸ್‌ಸಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.