ಹುಟ್ಟಿದ ಮಗುವಿನ ಮಾಡಿಸುವ ಸ್ತನ್ಯಪಾನದಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ: ಜುಬೇದ

| Published : Aug 04 2024, 01:16 AM IST

ಹುಟ್ಟಿದ ಮಗುವಿನ ಮಾಡಿಸುವ ಸ್ತನ್ಯಪಾನದಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ: ಜುಬೇದ
Share this Article
  • FB
  • TW
  • Linkdin
  • Email

ಸಾರಾಂಶ

ನರಸಿಂಹರಾಜಪುರ, ಹುಟ್ಟಿದ ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ ತಿಳಿಸಿದರು.

ಮೇದರಬೀದಿಯ ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಸಮಾರಂಭ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಹುಟ್ಟಿದ ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ ತಿಳಿಸಿದರು.

ಶುಕ್ರವಾರ ಪಟ್ಟಣದ ಮೇದರಬೀದಿಯ ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಎದೆ ಹಾಲು ಅಮೃತಕ್ಕೆ ಸಮಾನ. ಎದೆ ಹಾಲನ್ನು ಕುಡಿಸುವುದರಿಂದ ಸೌಂದರ್ಯ ಹಾಳಾಗುತ್ತದೆ ಎಂಬುದು ಕೆಲವು ಮಹಿಳೆಯರ ತಪ್ಪು ಕಲ್ಪನೆ. ಎದೆ ಹಾಲು ಕುಡಿಸುವುದರಿಂದ ಸ್ತನ ಕ್ಯಾನ್ಸರ್‌ ಬರುವುದಿಲ್ಲ. ಮಗುವಿಗೂ ಪೌಷ್ಠಿಕ ಆಹಾರ ಸಿಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿದ್ದ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಮಾಹಿತಿ ನೀಡಿ, ವಿಶ್ವದಾದ್ಯಂತ ಆಗಸ್ಟ್ 1 ರಿಂದ 7 ವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ನಡೆಸಲಾಗುತ್ತದೆ. ಶಿಶು ಮರಣ ತಡೆಗಟ್ಟಲು ಹಾಗೂ ಎದೆ ಹಾಲಿನ ಮಹತ್ವ ತಿಳಿಸುವುದು ಈ ಸಪ್ತಾಹದ ಉದ್ದೇಶ. ಪ್ರಸ್ತುತ ಪಟ್ಟಣ ಹಾಗೂ ತಾಲೂಕಿನ ವಿವಿಧ ಕಡೆ ಡೆಂಘೀ ಜ್ವರ ಕಾಣಿಸಿರುವುದರಿಂದ ಪ್ರತಿಯೊಬ್ಬರೂ ಸೊಳ್ಳೆಗಳ ನಿಯಂತ್ರಣ ಮಾಡಬೇಕು. ಮನೆ ಸುತ್ತ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು ಎಂದರು. ಸಭೆಯ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಸದಸ್ಯ ಮುನಾವರ್‌ ಪಾಷಾ ವಹಿಸಿದ್ದರು.p

ಇದೇ ಸಂದರ್ಭದಲ್ಲಿ 9 ಜನ ಗರ್ಭಿಣಿಯರಿಗೆ ಆರತಿ ಎತ್ತಿ, ಬಾಗಿನ ನೀಡಿ ಮಡಿಲು ತುಂಬುವ ಕಾರ್ಯಕ್ರಮ ನಡೆಸಲಾಯಿತು.

ಸಭೆಯಲ್ಲಿ ಆರೋಗ್ಯ ಇಲಾಖೆ ಸುಪ್ರಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪೋಷಣ ಅಭಿಯಾನದ ಸಂಯೋಜಕ ಕೌಶಿಕ್‌, ಮೇದರ ಬೀದಿ ಅಂಗನವಾಡಿ ಕಾರ್ಯಕರ್ತೆ ಅನಿತ, ಸಹಾಯಕಿ ಆಶಾ, ಆಶಾ ಕಾರ್ಯಕರ್ತೆಯರಾದ ಕುಸುಮ, ವಿಜಯಕುಮಾರಿ, ಗಾಯಿತ್ರಿ ಇದ್ದರು.