ಹವಾಮಾನ ಬದಲಾವಣೆ ಜನರ ಬದುಕಿನ ಮೇಲೆ ಪರಿಣಾಮ: ಡಾ.ಬಾಬು

| Published : Jun 01 2024, 12:46 AM IST

ಹವಾಮಾನ ಬದಲಾವಣೆ ಜನರ ಬದುಕಿನ ಮೇಲೆ ಪರಿಣಾಮ: ಡಾ.ಬಾಬು
Share this Article
  • FB
  • TW
  • Linkdin
  • Email

ಸಾರಾಂಶ

ಬಿ.ವಿ.ವಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭೂಗೋಳಶಾಸ್ತ್ರ ವಿಭಾಗದ ವತಿಯಿಂದ ಹವಾಮಾನ ಬದಲಾವಣೆ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕಲ್ಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಬಾಬು ಸನ್ಮಾನ ಅವರನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹವಾಮಾನ ಬದಲಾವಣೆಯು ತಾಪಮಾನ ಮತ್ತು ಹವಾಮಾನ ಮಾದರಿಗಳಲ್ಲಿನ ದೀರ್ಘಾವಧಿಯ ಬದಲಾವಣೆಗಳನ್ನು ಸೂಚಿಸುತ್ತವೆ. ಜಾಗತಿಕ ತಾಪಮಾನ ಏರಿಕೆಗೆ ಮಾನವರೇ ಕಾರಣವಾಗಿದ್ದು, ಜನರ ಬದುಕಿನ ಮೆಲೆ ಪರಿಣಾಮ ಬೀರಬಲ್ಲದು ಎಂದು ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಡಾ.ಬಾಬು ಹೇಳಿದರು.

ಇಲ್ಲಿನ ಬಿ.ವಿ.ವಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭೂಗೋಳಶಾಸ್ತ್ರ ವಿಭಾಗದ ವತಿಯಿಂದ ಹವಾಮಾನ ಬದಲಾವಣೆ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಪರಿಸರವನ್ನು ನಾವೂ ಸಮರ್ಪಕವಾಗಿ ಕಾಯ್ದುಕೊಂಡು ಹೋಗಬೇಕು. ಇಲ್ಲವಾದಲ್ಲಿ ಪ್ರತಿ ಚರಾಚರ ಜೀವಿ ಹಾಗೂ ವಸ್ತುಗಳ ಮೇಲೆ ಬೀರುವ ಪರಿಣಾಮವನ್ನು ನಾವು ನೇರವಾಗಿ ಅನುಭವಿಸಬೇಕಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್. ಜೆ. ಒಡೆಯರ್ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ನಾವೆಲ್ಲರೂ ಜಾಗೃತರಾಗಿ ಆ ಮೂಲಕ ಕಾರ್ಯಪ್ರವೃತ್ತರಾಗೋಣ ಎಂದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಪಿ. ಕೆ. ಚೌಗುಲಾ ಸ್ವಾಗತಿಸಿದರು, ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಎಸ್.ಎನ್.

ರಜಪೂತ ಪರಿಚಯಿಸಿದರು, ಎ.ಎಸ್. ಯಾದವಾಡ ಪ್ರಾರ್ಥಿಸಿದರು, ಪಿ.ಎಸ್. ಪಾತ್ರೋಟ ವಂದಿಸಿದರು, ವಿ.ಎಂ. ಕಡಪಟ್ಟಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.