ಸರ್ಕಾರದ ಯೋಜನೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಿ: ಸಿಇಒ

| Published : Jul 24 2024, 12:26 AM IST

ಸರ್ಕಾರದ ಯೋಜನೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಿ: ಸಿಇಒ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಆನಂದ ಪ್ರಕಾಶ್ ಮೀನಾ ಸೂಚಿಸಿದ್ದಾರೆ. ಮಡಿಕೇರಿ ಜಿ.ಪಂ.ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸರ್ಕಾರದ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಸೂಚಿಸಿದರು.

ನಗರದ ಜಿ.ಪಂ.ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ತೆರಿಗೆ ವಸೂಲಾತಿ, ಗ್ರಂಥಾಲಯಗಳ ಉನ್ನತೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಈಗಾಗಲೇ ಜಿಲ್ಲೆಗೆ 5 ಲಕ್ಷ ಮಾನವ ದಿನಗಳನ್ನು ಸೂಚಿಸುವ ಗುರಿ ನೀಡಲಾಗಿದೆ. ಈ ವರೆಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಮುಂದಿನ ದಿನಗಳಲ್ಲಿಯೂ ಸಾಕಷ್ಟು ಅಭಿವೃದ್ಧಿ ಕಾರ್ಯ ಮುಂದುವರಿಸಬೇಕು. ಸಾಮಾಜಿಕ ಲೆಕ್ಕಪರಿಶೋಧನೆಗೆ ಸಂಬಂಧಿಸಿದಂತೆ ವಸೂಲಾತಿ ಮಾಡಿ, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಬೇಕು ಎಂದು ಅವರು ತಿಳಿಸಿದರು.

ಪ್ರತಿ ತಿಂಗಳು 50 ಸಾವಿರ ಮಾನವ ದಿನಗಳನ್ನು ಸೃಜಿಸಬೇಕು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರತಿ ತಿಂಗಳು ರೋಜ್‌ಗಾರ್ ದಿನಾಚರಣೆ ಮಾಡುವ ಮೂಲಕ ಜನರಿಗೆ ಯೋಜನೆಯ ಮಾಹಿತಿ ನೀಡಿ ಉದ್ಯೋಗ ಒದಗಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗಳು ಕಡ್ಡಾಯವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸಬೇಕು ಎನ್‌ಆರ್‌ಎಲ್‌ಎಂ. ವತಿಯಿಂದ ಮಹಿಳೆಯರಿಗೆ ಸ್ವಚ್ಛ ವಾಹಿನಿ ಚಲಾಯಿಸುಲು ವಾಹನ ಚಾಲನಾ ತರಬೇತಿ ನೀಡಲಾಗಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ಗ್ರಾಮದಲ್ಲಿಯೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಕರೆ ಮಾಡಿದಾಗ ತಪ್ಪದೇ ಕರೆ ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ತಿಳಿಸಿದರು. ಜೊತೆಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲು ಬಾಕಿ ಇರುವ ಎಸ್.ಡಬ್ಲ್ಯೂ.ಎಂ. ಶೆಡ್‌ಗಳ ಕಾಮಗಾರಿಗಳನ್ನು ನಿಯಮಾನುಸಾರ ಕೈಗೆತ್ತಿಕೊಳ್ಳಬೇಕು ಎಂದರು.

ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು ಮಾತನಾಡಿ, ವಸತಿ ಯೋಜನೆಯಡಿ ಬಾಕಿ ಇರುವ ಮನೆಗಳನ್ನು ಪೂರ್ಣಗೊಳಿಸಬೇಕು. ಮಳೆಗಾಲವಾಗಿದ್ದು ಹೆಚ್ಚು ಎಚ್ಚರಿಕೆ ಮತ್ತು ಮುತುವರ್ಜಿಯಿಂದ ಪಿಡಿಒಗಳು ಕಾರ್ಯ ನಿರ್ವಹಿಸುವಂತೆ ಅವರು ತಿಳಿಸಿದರು.

ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ತಾ.ಪಂ. ಇಒಗಳಾದ ಶೇಖರ್, ಅಪ್ಪಣ್ಣ, ವೀರಣ್ಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಸುರೇಶ್ ಕುಮಾರ್ ಇತರರು ಇದ್ದರು.