ಪಿಎಂ 15 ಅಂಶ ಕಾರ್ಯಕ್ರಮ ಅನುಷ್ಠಾನಗೊಳಿಸಿ

| Published : Sep 07 2024, 01:42 AM IST

ಸಾರಾಂಶ

ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳು ಸಮರ್ಪಕ ಬಳಕೆ ಆಗಬೇಕು. ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು. ಮೀನುಗಾರಿಕೆ ಇಲಾಖೆಯಿಂದ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಬಲೆ ಹಾಗೂ ಇತ್ಯಾದಿ ಅಗತ್ಯ ಉಪಕರಣಗಳನ್ನು ನೀಡಲಾಗಿದೆ

ಕನ್ನಡಪ್ರಭ ವಾರ್ತೆ ಕೋಲಾರಅಲ್ಪಸಂಖ್ಯಾತ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಪ್ರಧಾನಮಂತ್ರಿಗಳ ೧೫ ಹೊಸ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿನಾಕಾರಣ ನೆಪವೊಡ್ಡದೆ ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು, ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಕೌಶಲ್ಯ ಹಾಗೂ ಇತರೆ ಉದ್ಯೋಗಗಳಿಗೆ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ತಿಳಿಸಿದರು.ನಗರದ ಜಿಲ್ಲಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಗುರಿ ಸಾಧನೆಗೆ ಸೂಚನೆತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳು ಸಮರ್ಪಕ ಬಳಕೆ ಆಗಬೇಕು. ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು. ಮೀನುಗಾರಿಕೆ ಇಲಾಖೆಯಿಂದ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಬಲೆ ಹಾಗೂ ಇತ್ಯಾದಿ ಅಗತ್ಯ ಉಪಕರಣಗಳನ್ನು ನೀಡಲಾಗಿದೆ ಅದರ ಮಾಹಿತಿ ಕೂಡ ಇಲಾಖಾ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಿದೆ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದರು.ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸಲು, ಜಿಲ್ಲೆಯಲ್ಲಿ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ಯುವಕ ಯುವತಿಯರಿಗೆ ಈಗಾಗಲೇ ಉದ್ಯೋಗ ದೊರೆತಿವೆ. ಮಹಿಳಾ ಮತ್ತು ಪುರುಷರ ಐಟಿಐ ಕಾಲೇಜುಗಳಲ್ಲಿ ಮೀಸಲಾತಿ ಅನ್ವಯ ಈಗಾಗಲೇ ಪ್ರವೇಶ ನೀಡಿದೆ, ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ಪ್ರವೇಶಾತಿ ನೀಡಿದೆ ಎಂದು ಅಧಿಕಾರಿಗಳು ವಿವರಿಸಿದರು.ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಬಹಳಷ್ಟು ಅರ್ಜಿ ಬಂದಿವೆ. ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಿ, ಕೂಡಲೇ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಡೇ-ನಲ್ಮ್ ಯೋಜನೆಯಡಿ ಅಲ್ಪಸಂಖ್ಯಾತರಿಗೆ ಈಗಾಗಲೇ ವಿವಿಧ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಗಳಿಗೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.ರೈತರಿಗೆ ಸಾಲ ಸೌಲಭ್ಯ:ಸಹಕಾರ ಇಲಾಖೆಯಿಂದ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಈಗಾಗಲೇ ದೀರ್ಘಾವಧಿ ಸಾಲ ನೀಡಿದೆ. ನೀರಾವರಿ ಜಮೀನು ಹೊಂದಿದ ರೈತರಿಗೆ ಶೇ.೩ ಬಡ್ಡಿ ದರದಲ್ಲಿ ೧೫ ಲಕ್ಷದ ವರೆಗೆ ಸಾಲ ನೀಡಲಾಗುವದು ಎಂದು ಸಹಕಾರ ಇಲಾಖೆ ಅಧಿಕಾರಿಗಳು ಹೇಳಿದರು. ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸುಮಯಾ, ಎಸ್‌ಪಿ ಬಿ. ನಿಖಿಲ್, ಎಸಿ ಡಾ. ಮೈತ್ರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮುರಳಿ, ಜಿಲ್ಲಾ ನಗರಾಭಿವೃದ್ದಿ ಯೋಜನಾ ನಿರ್ದೇಶಕಿ ಅಂಬಿಕಾ, ಕೃಷಿ ಜಂಟಿ ನಿರ್ದೇಶಕಿ ಸುಮಾ ಇದ್ದರು.