ಸಾರಾಂಶ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ತಾಲೂಕು ಕಚೇರಿಯನ್ನು ಆರಂಭಿಸಲಾಗುತ್ತದೆ ಎಂದು ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಚ್.ಎಂ.ಮಧು ಹೇಳಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ ಆ.14ರಂದು ಬೆಳಗ್ಗೆ 10ಕ್ಕೆ ಹಳೆ ಡಿ.ಸಿ. ಕಚೇರಿ ಕಟ್ಟಡದಲ್ಲಿರುವ ತಾಲೂಕು ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಚ್.ಎಂ.ಮಧು ಹೇಳಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕಚೇರಿಯನ್ನು ಆರಂಭಿಸಲಾಗುತ್ತದೆ. ಯೋಜನೆಯ ಫಲಾನುಭವಿಗಳು ಮತ್ತು ಫಲಾನುಭವಿಗಳಾಗ ಬಯಸುವವರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಛೇರಿ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯೆ ಬಲ್ಕೀಷ್ ಬಾನು ನೆರವೇರಿಸುವರು. ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಸಂಸದ ಆಯನೂರು ಮಂಜುನಾಥ್, ಮಾಜಿ ಶಾಸಕ ಎಚ್.ಎಂ.ಚಂದ್ರ ಶೇಖರಪ್ಪ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಜಿ.ಪಲ್ಲವಿ, ಎಂಐಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಉಪಸ್ಥಿತರಿರುವರು.ಜತೆಗೆ ಗಣ್ಯರಾದ ಅಪ್ತಾಜ್ ಪರ್ವೇಜ್, ಆರ್.ಶಿವಣ್ಣ, ಇಕ್ಕೇರಿ ರಮೇಶ್, ಎಸ್.ಕೆ.ಮರಿಯಪ್ಪ, ಖಲೀಂ ಪಾಶಾ, ರಮೇಶ್ ಹೆಗಡೆ, ಎಸ್.ಸಿ. ಯೋಗೇಶ್, ಡಾ. ಶ್ರೀನಿವಾಸ ಕರಿಯಣ್ಣ, ಕಲಗೋಡು ರತ್ನಾಕರ್, ಎನ್.ರಮೇಶ್, ಇಸ್ಮಾಯಿಲ್‌ಖಾನ್, ಪಿ.ಓ.ಶಿವಕುಮಾರ್, ಎಂ.ಶ್ರೀಕಾಂತ್ ಸೇರಿದಂತೆ ಹಲವರು ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಾಧಿಕಾರದ ಪದಾಧಿಕಾರಿಗಳಾದ ಎಚ್.ಡಿ.ದೇವಿಕುಮಾರ್, ನಿಖಿಲ್‍ಮೂರ್ತಿ, ಎಸ್.ಕುಮಾರೇಶ್, ಕೆ.ಎಸ್.ಮೋಹನ್ , ಎಲಿಜಬೆತ್ ಗ್ಲಾಡಿಸ್, ವಾಗೀಶ್, ಜಗಧೀಶ್ವರ, ಇರ್ಫಾನ್, ಬಸವರಾಜ್ ಮತ್ತಿತರರು ಇದ್ದರು.