ಸರ್ಕಾರದ ೫ ಗ್ಯಾರಂಟಿ ಯೋಜನೆಗಳನ್ನು ತಾಲೂಕಿನಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಮಧ್ಯಮ ಹಾಗೂ ಬಡ ವರ್ಗದವರಿಗೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಕನ್ನಡಪ್ರಭ ವಾರ್ತೆ ಭದ್ರಾವತಿ
ಸರ್ಕಾರದ ೫ ಗ್ಯಾರಂಟಿ ಯೋಜನೆಗಳನ್ನು ತಾಲೂಕಿನಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಮಧ್ಯಮ ಹಾಗೂ ಬಡ ವರ್ಗದವರಿಗೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.ಅವರು ತಾಲೂಕಿನ ಕಂಬದಾಳು ಹೊಸೂರು ಪಂಚಾಯಿತಿ ವ್ಯಾಪ್ತಿಯ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ಸರ್ಕಾರ ಕೋಟ್ಯಾಂತರ ರು. ಅನುದಾನ ಬಿಡುಗಡೆಗೊಳಿಸಿದ್ದು, ಬಹುತೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಮುಂಬರುವ ಚುನಾವಣೆಯಲ್ಲಿ ಪುತ್ರ ಬಿ.ಎಸ್ ಗಣೇಶ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಕ್ಷರಿ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಸುತ್ತಮುತ್ತಲಿನ ಪಂಚಾಯಿತಿಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.