ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಲಕ್ಷ್ಮೀ ಹೆಬ್ಬಾಳ್ಕರ್

| Published : Mar 16 2024, 01:49 AM IST

ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಲಕ್ಷ್ಮೀ ಹೆಬ್ಬಾಳ್ಕರ್
Share this Article
  • FB
  • TW
  • Linkdin
  • Email

ಸಾರಾಂಶ

ಸವದತ್ತಿ ಪಟ್ಟಣದ ಗುರುಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಾಗೂ ತಾಪಂ ಸಂಯುಕ್ತ ಆಶ್ರಯದಲ್ಲಿ ನಡೆದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಸವದತ್ತಿ

ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯದಲ್ಲಿ ಯಶಸ್ವಿ ಆಡಳಿತ ನಡೆಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಾಗೂ ತಾಪಂ ಸಂಯುಕ್ತ ಆಶ್ರಯದಲ್ಲಿ ನಡೆದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ 1.20 ಕೋಟಿ ಕುಟುಂಬಗಳಿಗೆ ಇಲಾಖೆಯಿಂದ ಜಾತಿ, ಪಕ್ಷ, ಧರ್ಮ ಎನ್ನದೆ ಎಲ್ಲ ಪ್ರತಿ ತಿಂಗಳಿಗೆ ₹ 2 ಸಾವಿರ ಮಹಿಳೆಯರಿಗೆ ನೀಡಲಾಗುತ್ತಿದೆ. ನಮ್ಮಲ್ಲಿ ಸ್ವಾರ್ಥ ರಾಜಕಾರಣ ಇಲ್ಲದಾಗಿದ್ದು, ಕೊರೊನಾ ನಂತರದಲ್ಲಿ ಜನರ ಬದುಕು ಅತಂತ್ರವಾಗಿರುವುದನ್ನು ಗಮನಿಸಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಜನರ ಬದುಕು ಹಸನಾಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಪ್ರತಿ ತಿಂಗಳು ₹ 15.99ಕೋಟಿಯಂತೆ ವರ್ಷಕ್ಕೆ ₹ 189 ಕೋಟಿ ಹಣ ಸವದತ್ತಿ ಮತ್ತು ಯರಗಟ್ಟಿ ಭಾಗದಲ್ಲಿ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ತಲುಪಿಸಲಾಗುತ್ತಿದೆ. ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನರ ಬೆಂಬಲ ಸದಾ ಇರಲಿ ಎಂದು ಮನವಿ ಮಾಡಿದರು.

ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಸುಮಾರು ₹ 55 ಸಾವಿರ ಕೋಟಿ ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮಹಿಳೆಯರ ಸಬಲೀಕರಣ ಹಾಗೂ ಬಡವರ ಉದ್ಧಾರಕ್ಕಾಗಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಯಾವುದೇ ಸ್ವಾರ್ಥ ಇಲ್ಲ ಎಂದು ಹೇಳಿದರು.

ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಸರ್ಕಾರ ಜನರ ಮನೆ ಮನೆಗೆ ಜನಪರ ಯೋಜನೆಗಳನ್ನು ತಲುಪಿಸುವ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ವಿಷಯ. ಲೋಕೋಪಯೋಗಿ ಇಲಾಖೆಯಿಂದ ₹ 150 ಕೋಟಿ ಹಾಗೂ ನೀರಾವರಿ ಇಲಾಖೆಯಿಂದ ₹ 204 ಕೋಟಿ ಸವದತ್ತಿ ಯಲ್ಲಮ್ಮಾ ಮತಕ್ಷೇತ್ರಕ್ಕೆ ಸರ್ಕಾರದಿಂದ ಅನುದಾನ ಮಂಜೂರಾಗಿದ್ದು, ಇದರಲ್ಲಿ ಅಭಿವೃದ್ಧಿ ಕಾಗಮಾರಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ ಅವರು, ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಮತಕ್ಷೇತ್ರದಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.

ತಾಪಂ ಕಾರ್ಯನಿರ್ವಣಾಧಿಕಾರಿ ಯಶವಂತಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾಜಿ ಶಾಸಕ ಆರ್.ವಿ.ಪಾಟೀಲ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಮಲ್ಲು ಜಕಾತಿ, ಚಂದ್ರು ಜಂಬ್ರಿ, ಮೃಣಾಲ್‌ ಹೆಬ್ಬಾಳಕರ, ಸಿಡಿಪಿಒ ಸುನಿತಾ ಪಾಟೀಲ, ಬಸವರಾಜ ಗುರಣ್ಣವರ, ಡಿ.ಡಿ. ಟೋಪೋಜಿ, ಉಮೇಶ ಬಾಳಿ, ಮಹಾರಾಜಗೌಡ ಪಾಟೀಲ, ರಾಮನಗೌಡ ತಿಪರಾಶಿ, ಲತೀಪ ಸವದತ್ತಿ, ಸುನೀಲ ಸುಳ್ಳದ, ಶಿವಾನಂದ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಬೇವೂರ, ಬಿ.ಎನ್.ಪ್ರಭುನವರ, ಶಿವಕುಮಾರ ರಾಠೋಡ ಇತರರು ಉಪಸ್ಥಿತರಿದ್ದರು.ತಹಸೀಲ್ದಾರ್ ಮಧುಸೂದನ್‌ ಕುಲಕರ್ಣಿ ಸ್ವಾಗತಿಸಿದರು. ಶಿವಾನಂದ ತಾರಿಹಾಳ ನಿರೂಪಿಸಿದರು. ಬಿಇಒ ಮೋಹನ ದಂಡಿನ ವಂದಿಸಿದರು.