ಮಕ್ಕಳು,ಮಹಿಳೆಯರ ರಕ್ಷಣೆಗೆ ವಿಶೇಷ ಕಾಯ್ದೆಗಳ ಜಾರಿ: ಭಜಂತ್ರಿ

| Published : Nov 18 2024, 12:05 AM IST

ಮಕ್ಕಳು,ಮಹಿಳೆಯರ ರಕ್ಷಣೆಗೆ ವಿಶೇಷ ಕಾಯ್ದೆಗಳ ಜಾರಿ: ಭಜಂತ್ರಿ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆಗಳ ನಡೆಯದಂತೆ ಸರ್ಕಾರ ಮಕ್ಕಳು, ಮಹಿಳೆಯರ ರಕ್ಷಣೆಗೆ ಹೊಸ ಕಾಯ್ದೆ, ಕಾನೂನು ಜಾರಿಗೊಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಂತೇಶ್ ಭಜಂತ್ರಿ ಹೇಳಿದರು.

ಮಹಿಳೆಯರು-ಮಕ್ಕಳ ಕಾಯ್ದೆ, ಯೋಜನೆಗಳ ಮಾಹಿತಿ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆಗಳ ನಡೆಯದಂತೆ ಸರ್ಕಾರ ಮಕ್ಕಳು, ಮಹಿಳೆಯರ ರಕ್ಷಣೆಗೆ ಹೊಸ ಕಾಯ್ದೆ, ಕಾನೂನು ಜಾರಿಗೊಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಂತೇಶ್ ಭಜಂತ್ರಿ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆಯೋಜಿಸಿದ್ದ ಮಹಿಳೆಯರು ಮತ್ತು ಮಕ್ಕಳ ಸಂಬಂದಿತ ಕಾಯ್ದೆ ಹಾಗೂ ಯೋಜನೆಗಳ ಮಾಹಿತಿ ಕುರಿತ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಮಹಿಳೆಯರ, ಮಕ್ಕಳ ಕಾನೂನುಗಳ ಸದ್ಭಳಕೆಯಾಗಬೇಕು. ಕಾನೂನಿನ ಬಗ್ಗೆ ಅರಿವು ಹೊಂದಿದರೆ ರಕ್ಷಿಸಿಕೊಳ್ಳಬಹುದಾಗಿದೆ. ಮಹಿಳೆಯರ, ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ, ಕಿರುಕುಳ, ದೌರ್ಜನ್ಯಗಳನ್ನು ತಡೆಗಟ್ಟಬೇಕು.ಈ ನಿಟ್ಟಿನಲ್ಲಿ ಎಲ್ಲಾ ಪ್ರೌಢಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಬೇಕು.

ಮಕ್ಕಳನ್ನು ಕಾನೂನು ಬದ್ಧವಾಗಿ ದತ್ತು ತೆಗೆದುಕೊಳ್ಳಬೇಕು. ಮಹಿಳೆಯರ ತಮಗೆ ಅನ್ಯಾಯವಾದರೆ ನ್ಯಾಯ ಹೋರಾಟ ಮಾಡಲು ಇಲಾಖೆ ಸೂಕ್ತ ಮಾರ್ಗದರ್ಶನ ನೀಡುತ್ತದೆ ಎಂದರು.

ಕಾರ್ಯಾಗಾರದಲ್ಲಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಜಿಲ್ಲಾ ಮಹಿಳಾ ಮತ್ತು ಕಲ್ಯಾಣ ಇಲಾಖೆ ್ಧಿಕಾರಿ ಸಂತೋಷ್ ಕುಮಾರ್,ಸುಂದರೇಶ್ ಮತ್ತಿತರರು ಇದ್ದರು

16 ಶ್ರೀ ಚಿತ್ರ 2-

ಶೃಂಗೇರಿ ಪಟ್ಟಣದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಆಯೋಜಿಸಿದ್ದ ಮಹಿಳೆಯರು ಮತ್ತು ಮಕ್ಕಳ ಸಂಬಂಧಿತ ಕಾನೂನು ಬಗ್ಗೆ ಮಾಹಿತಿ ಕಾರ್ಯಕ್ರಮದಲ್ಲಿ ಮಹಂತೇಶ್ ಭಜಂತ್ರಿ ಮಾತನಾಡಿದರು.