ಸಾರಾಂಶ
ಇಳಕಲ್ಲ: ದೇಶಕ್ಕೆ ಸ್ವಾತಂತ್ರ್ಯ ದೊರೆತು ೭೫ನೇ ಗಣ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಅತ್ಯಂತ ಮಹತ್ವದ ದಿನವಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದ ತಹಸೀಲ್ದಾರ್ ಕಚೇರಿಯಲ್ಲಿ ೭೫ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಂದ ಜನರಿಗಾಗಿ ಜನರಿಗೋಸ್ಕರ ಎಂಬ ನುಡಿಯೊಂದಿಗೆ ದೇಶವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ.
ಕನ್ನಡಪ್ರಭ ವಾರ್ತೆ ಇಳಕಲ್ಲ
ದೇಶಕ್ಕೆ ಸ್ವಾತಂತ್ರ್ಯ ದೊರೆತು ೭೫ನೇ ಗಣ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಅತ್ಯಂತ ಮಹತ್ವದ ದಿನವಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.ನಗರದ ತಹಸೀಲ್ದಾರ್ ಕಚೇರಿಯಲ್ಲಿ ೭೫ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಂದ ಜನರಿಗಾಗಿ ಜನರಿಗೋಸ್ಕರ ಎಂಬ ನುಡಿಯೊಂದಿಗೆ ದೇಶವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ಸರ್ಕಾರ ಕೊಟ್ಟ ಭರವಸೆಯಂತೆ ಆಡಳಿತ ನಡೆಸುತ್ತಿದೆ. ಸಂವಿಧಾನ ರಚನೆ ಮಾಡಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯಂತಹ ಮಹಾತ್ಮರು ಹುಟ್ಟಿ ಬೆಳೆದ ಈ ನಾಡಿನಲ್ಲಿ ನಾವು ಹುಟ್ಟಿರುವುದು ಅದೃಷ್ಟ ಎಂದರು.
ತಹಸೀಲ್ದಾರ್ ನಿಂಗಪ್ಪ ಬಿರಾದಾರ ಧ್ವಜಾರೋಹಣ ನೆರವೇರಿಸಿದರು. ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು. ಸಮಾರಂಭಂಕ್ಕೆ ಆಗಮಿಸಿದ ಶಾಸಕ ವಿಜಯಾನಂದ ಕಾಶಪ್ಪನವರಗೆ ಶಾಲೆಯ ವಿದ್ಯಾರ್ಥಿನಿಯರು ಪುಷ್ಪವೃಷ್ಟಿ ಮಾಡಿ ಬರಮಾಡಿಕೊಂಡರು. ವೇದಿಕೆಯಲ್ಲಿ ತಾಪಂ ಆಡಳಿತಾಧಿಕಾರಿ ಮುರಳೀಧರ ದೇಶಪಾಂಡೆ ಹಾಗೂ ನಗರ ಸಭೆಯ ಸದಸ್ಯರಾದ ಅಬು ಹಳ್ಳಿ, ಯಲ್ಲಪ್ಪ ರಾಜಾಪುರ ಉಪಸ್ಥಿತರಿದ್ದರು.