ಸಾರಾಂಶ
ರಾಜ್ಯ ಅಡಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಗುರುವಾರ ದೆಹಲಿಯಲ್ಲಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕದ ಹಲವು ಪ್ರಮುಖ ಸಚಿವರು ಮತ್ತು ಸಂಸದರ ಉಪಸ್ಥಿತಿಯಲ್ಲಿ ಮಹತ್ವದ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಜ್ಯ ಅಡಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಗುರುವಾರ ದೆಹಲಿಯಲ್ಲಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕದ ಹಲವು ಪ್ರಮುಖ ಸಚಿವರು ಮತ್ತು ಸಂಸದರ ಉಪಸ್ಥಿತಿಯಲ್ಲಿ ಮಹತ್ವದ ಸಭೆ ನಡೆಯಿತು.ಈ ಮಹತ್ವದ ಸಭೆಯಲ್ಲಿ ಅಡಕೆ ಬೆಳೆ ಎದುರಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗ, ಅಡಕೆ ತೇವಾಂಶ (ಸಾಂದ್ರತೆ), ಅಡಕೆಗೆ ಬೆಂಬಲ ಬೆಲೆ, GST ಕಡಿಮೆ ಮಾಡುವ ಕುರಿತು, ಅಡಕೆ ರಫ್ತು ಮತ್ತು ಆಮದುಗಳ ಕುರಿತು ಚರ್ಚೆ ನಡೆಸಲಾಯಿತು.
ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಕೂಡ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.ಈ ಸಭೆಯಲ್ಲಿ ಕೇಂದ್ರ ಕೈಗಾರಿಕಾ ಹಾಗೂ ಉಕ್ಕು ಖಾತೆಯ ಸಚಿವರಾದ ಎಚ್. ಡಿ. ಕುಮಾರಸ್ವಾಮಿ, ಕೇಂದ್ರ ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ, ಕರ್ನಾಟಕದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಗೋವಿಂದ ಕಾರಜೋಳ, ಯದುವೀರ್ ಒಡೆಯರ್, ಡಾ. ಪ್ರಭಾ ಮಲ್ಲಿಕಾರ್ಜುನ್, ತೀರ್ಥಹಳ್ಳಿ ಶಾಸಕರಾದ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕೊಡ್ಗಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಲಾಯಿತು.