ಸಾರಾಂಶ
ಗ್ರಾಮೀಣ ಪ್ರದೇಶದ ನಾಗರಿಕರ ಆರ್ಥಿಕ - ಸಾಮಾಜಿಕ ಪ್ರಗತಿಗೆ ಸಹಕಾರಿ ಕ್ಷೇತ್ರದ ಪಾತ್ರ ಮಹತ್ವದಾಗಿದೆ ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಕೆಂಗೇರಿ
ಗ್ರಾಮೀಣ ಪ್ರದೇಶದ ನಾಗರಿಕರ ಆರ್ಥಿಕ - ಸಾಮಾಜಿಕ ಪ್ರಗತಿಗೆ ಸಹಕಾರಿ ಕ್ಷೇತ್ರದ ಪಾತ್ರ ಮಹತ್ವದಾಗಿದೆ ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.ತಾವರೆಕೆರೆ ಹೋಬಳಿಯ ಕುರುಬರ ಪಾಳ್ಯದ ಹಾಲು ಉತ್ಪಾದಕ ಸಹಕಾರ ಸಂಘದಿಂದ ಆಯೋಜಿಸಿದ್ದ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ಕೆ.ಎಂ ಕೃಷ್ಣಯ್ಯ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು. ಹೈನುಗಾರಿಕೆ ಪರ್ಯಾಯ ಉದ್ಯೋಗ ಮಾರ್ಗವಾಗಿದ್ದು, ರೈತರ ಆರ್ಥಿಕ ಸದೃಢತೆಗೆ ಸಹಕಾರಿಯಾಗಿದೆ ಎಂದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ.ಎಂ.ಕೃಷ್ಣಯ್ಯ, ಗ್ರಾಮೀಣ ಪ್ರದೇಶದ ನಾಗರಿಕರ ಸಾಮಾಜಿಕ ಪ್ರಗತಿಗೆ ಸಹಕಾರ ಸಂಸ್ಥೆಯ ಸೇವೆ ಪರಿಗಣಿಸಿ ಸರ್ಕಾರ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದರು.ಕುರುಬರಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಉಪಾಧ್ಯಕ್ಷೆ ಪಾರ್ವತಮ್ಮ, ನಿರ್ದೇಶಕ ಶಿವರಾಮು, ವೆಂಕಟೇಶ್, ಚಂದ್ರಪ್ಪ, ಶಿವಮ್ಮ, ಪದ್ಮಾ, ವೀರಮ್ಮ, ಕೆ. ಮುತ್ತುರಾಜು, ಪ್ರಧಾನ ವ್ಯವಸ್ಥಾಪಕ ಡಾ। ಕೆ.ಸಿ.ಶ್ರೀಧರ್, ತಾವರೆಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೇವಣಸಿದ್ದಯ್ಯ ಉಪಸ್ಥಿತರಿದ್ದರು.
ಇದೇ ವೇಳೆ ಸಂಘದ ವತಿಯಿಂದ ರೈತರಿಗೆ ಹಾಲಿನ ಕ್ಯಾನ್ ವಿತರಿಸಲಾಯಿತು.