ಸಾರಾಂಶ
ಬಾಗಲಕೋಟೆ: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲೂಕು ಘಟಕದಿಂದ ಕಸಾಪ ಭವನದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಕಾಲಕ್ಕೆ ತಕ್ಕಂತೆ ಬದಲಾವಣೆಯಾಗಿ ವಿಫುಲವಾಗಿರುವ ಅವಕಾಶಗಳನ್ನು ಬಳಸಿಕೊಂಡು ಸಬಲೆಯಾಗಿ ಬೆಳೆಯುತ್ತಿದ್ದಾಳೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಕಾಲಕ್ಕೆ ತಕ್ಕಂತೆ ಬದಲಾವಣೆಯಾಗಿ ವಿಫುಲವಾಗಿರುವ ಅವಕಾಶಗಳನ್ನು ಬಳಸಿಕೊಂಡು ಸಬಲೆಯಾಗಿ ಬೆಳೆಯುತ್ತಿದ್ದಾಳೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲೂಕು ಘಟಕದಿಂದ ಕಸಾಪ ಭವನದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರು ಮುನ್ನುಗ್ಗುತ್ತಿದ್ದು, ಈ ಮೂಲಕ ನಾನು ಸಮರ್ಥವಾಗಿ ಇದ್ದೇನೆ ಎನ್ನುವ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಬಾಗಲಕೋಟೆ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪಾರ್ವತಿ ಆಲೂರ ಮಾತನಾಡಿ, ಮಹಿಳೆಯರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳಬೇಕು. ಉತ್ತಮ ಸಮಾಜ ಕಟ್ಟಲು ಮಹಿಳೆಯ ಪಾತ್ರ ಅತ್ಯಂತ ಹಿರಿದಾಗಿದೆ ಎಂದು ಹೇಳಿದರು.ಸಾಹಿತಿ ಪ್ರಿಯಾ ಕಟ್ಟಿ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರದ ಸಾಧಕರಾದ ಕಾಶಿಬಾಯಿ ಬಿಲಕೇರಿ (ಕೃಷಿ), ಜ್ಯೋತಿ ಕಿರಣ ದಾಸ್ (ಮಹಿಳಾ ಸಂಘಟನೆ) ಹಾಗೂ ನಂದವ್ವ ಗದ್ದನಕೇರಿ (ಜಾನಪದ) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಹಿಳಾಪರ ಚಿಂತಕಿ ಸುವರ್ಣ ಕೊಳಚಿ, ಕೆ.ಎಲ್. ಬಿಲಕೇರಿ, ಮಲ್ಲಿಕಾರ್ಜುನ ಹೆಗ್ಗಳಗಿ, ಆರ್.ಡಿ. ಹಳಂಗಳಿ, ಡಾ.ಎಸ್.ಬಿ. ಪಾಟೋಳ್ಳಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಇದ್ದರು.ತಾಲೂಕಾಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ ಸ್ವಾಗತಿಸಿದರು. ಡಾ.ಉಮಾ ಅಕ್ಕಿ ಪರಿಚಯಿಸಿದರು. ಲಕ್ಕಮ್ಮದೇವಿ ಕೆಳಗಿನಗೌಡರ ನಿರೂಪಿಸಿದರು. ಎಸ್.ಎಸ್.ಗಾಣಗೇರ ವಂದಿಸಿದರು.