ಸುಧಾರಿಸಿದ ದ್ವಿತೀಯ ಪಿಯುಸಿ ಫಲಿತಾಂಶ

| Published : Apr 09 2025, 12:30 AM IST

ಸಾರಾಂಶ

ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆ ಕಂಡು ಬಂದಿದೆ. ಕಳೆದ ವರ್ಷ 24 ನೇ ಸ್ಥಾನದಲ್ಲಿದ್ದ ಜಿಲ್ಲಾ ಫಲಿತಾಂಶ ಈ ವರ್ಷ 18ನೇ ಸ್ಥಾನಕ್ಕೆ ಜಿಗಿದಿದ್ದು‌ ಫಲಿತಾಂಶ ತೃಪ್ತಿದಾಯಕವಾಗಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆ ಕಂಡು ಬಂದಿದೆ. ಕಳೆದ ವರ್ಷ 24 ನೇ ಸ್ಥಾನದಲ್ಲಿದ್ದ ಜಿಲ್ಲಾ ಫಲಿತಾಂಶ ಈ ವರ್ಷ 18ನೇ ಸ್ಥಾನಕ್ಕೆ ಜಿಗಿದಿದ್ದು‌ ಫಲಿತಾಂಶ ತೃಪ್ತಿದಾಯಕವಾಗಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದರು.

ಜಿಲ್ಲೆಯಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಶ್ರಮ ಹಾಗೂ ಇಲಾಖೆಯ ಕಾರ್ಯ ವೈಖರಿಯಿಂದ ಈ ವರ್ಷ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು. ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇಂಗ್ಲಿಷ್ ಭಾಷೆಯ ಕ್ಲಿಷ್ಟತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಸುಮಾರು 6 ಶನಿವಾರ ವಿಶೇಷ ಉಪನ್ಯಾಸಕರನ್ನು ಒಳಗೊಂಡಂತೆ ಜಿಲ್ಲೆಯಾದ್ಯಂತ ನೋಡಲ್ ಕೇಂದ್ರಗಳಲ್ಲಿ ವಿಶೇಷ ಉಪನ್ಯಾಸ ಕಾರ‍್ಯಕ್ರಮಗಳು ನಡೆದವು. ಅಲ್ಲದೆ ಉನ್ನತ ಶ್ರೇಣಿಯ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಉಪನ್ಯಾಸ ಕಾರ‍್ಯಗಾರಗಳಿಂದ ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗೆ ಕಾರಣವಾಯಿತು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟಾರೆ ಕಲಾ ವಿಭಾಗದಲ್ಲಿ 4318 ವಿದ್ಯಾರ್ಥಿಗಳಿಗೆ 2476, ವಿಜ್ಞಾನ ವಿಭಾಗದಲ್ಲಿ 10051 ವಿದ್ಯಾರ್ಥಿಗಳಿಗೆ 7784, ಹಾಗೂ ವಾಣಿಜ್ಯ ವಿಭಾಗದಲ್ಲಿ 8587 ವಿದ್ಯಾರ್ಥಿಗಳಿಗೆ 6274 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಫಲಿತಾಂಶದಂತೆ 22956 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಅದರಲ್ಲಿ 16534 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರು

ಕಲಾ ವಿಭಾಗದಲ್ಲಿ ತುಮಕೂರು ಎಂಪ್ರೆಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವರ ಕಾಲೇಜಿನ ಅದಿತಿ ಎಚ್ 584 ಅಂಕಗಳು ಪ್ರಥಮ ಸ್ಥಾನ , ತಿಪಟೂರು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಗಣೇಶ್ 580 ಅಂಕಗಳು ದ್ವಿತೀಯ ಸ್ಥಾನ ತಿಪಟೂರು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಚೇತನ್ ಬಿ ಆರ್ 579 ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 4 ನೇ ಸ್ಥಾನ ಪಡೆದಿರುವ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಶ್ರೀ ಲಕ್ಷ್ಮಿ ಆರ್ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇದೇ ಕಾಲೇಜಿನ ಎಸ್ ಎನ್ ಲಕ್ಷ್ಮಿ 593 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದೇ ಕಾಲೇಜಿನ ಎಚ್ ಎನ್ ಭುವನ್ ಹಾಗೂ ಜಮುನಾ ಎಸ್ ಜೆ 592ಅಂಕಗಳನ್ನು ಪಡೆದು ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಚಿಕ್ಕನಾಯಕನಹಳ್ಳಿ ವಿದ್ಯಾ ವಾರಿಧಿ ಪದವಿ ಪೂರ್ವ ಕಾಲೇಜಿನ ಆದಿತ್ಯ ಎಚ್ ಎಸ್ ಪ್ರಥಮ ಸ್ಥಾನ ಪಡೆದಿದ್ದು , ಶಾರದಂಬಾ ಪದವಿ ಪೂರ್ವ ಕಾಲೇಜಿನ ಕೀರ್ತನಾ ಎಂ ಎಸ್ ಹಾಗೂ ವಿಧ್ಯಾನಿಧಿ ಕಾಲೇಜಿನ ಶಿವಾನಿ ಎಸ್ ರೈ 593 ಅಂಕಗಳನ್ನು ಪಡೆದ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೂ ತಿಪಟೂರಿನ ಎಸ್ ಎಸ್ ಪದವಿ ಪೂರ್ವ ಕಾಲೇಜಿನ ಹರ್ ಪ್ರೀತ್ ಏ ಹಾಗೂ ವಿದ್ಯಾನಿಧಿ ಕಾಲೇಜಿನ ನಿತೀಶ್ ಕೆ. ಪಿ 591 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರಲು ಜಿಲ್ಲಾ ಉಪನಿರ್ದೇಶಕರ ಶಿಸ್ತುಬದ್ಧ ಆಡಳಿತವೇ ಕಾರಣ ಎಂದು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ ತಿಳಿಸಿದರು.

ಉಪನಿರ್ದೇಶಕರ ಕಾರ‍್ಯಶೀಲತೆ, ದಕ್ಷ ಆಡಳಿತ, ಮತ್ತು ಶಿಸ್ತುಬದ್ಧ ಶೈಕ್ಷಣಿಕ ಚಟುವಟಿಕೆ ಹಾಗೂ ಜಿಲ್ಲೆಯ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಶ್ರಮದಿಂದ ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಸಾದ್ಯವಾಯಿತು ಎಂದು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಮಹಾಲಿಂಗೇಶ್ ತಿಳಿಸಿದ್ದಾರೆ.