ಸಾರಾಂಶ
ಬಸವನಬಾಗೇವಾಡಿ: ಶಾಲೆಯ ವಸ್ತುಗಳ ಸಂಗ್ರಹ ಕೋಣೆಯಲ್ಲಿ ಪ್ರಭಾರಿ ಮುಖ್ಯಶಿಕ್ಷಕ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಶಾಲಾವಧಿ ಮುಗಿದ ನಂತರ ಪ್ರಕರಣ ಬೆಳಕಿಗೆ ಬಂದಿರುವ ಘಟನೆ ಬುಧವಾರ ನಡೆದಿದೆ. ತಾಲೂಕಿನ ನಾಗೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಿ.ಎಸ್.ಹಡಪದ (೫೪) ನೇಣು ಬಿಗಿದುಕೊಂಡ ಪ್ರಭಾರಿ ಮುಖ್ಯಶಿಕ್ಷಕ.

ಶಾಲೆಯಲ್ಲಿ ಕಳೆದೆರಡು ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಒಂದು ವರ್ಷದಿಂದ ಪ್ರಭಾರಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶಾಲಾ ಅವಧಿಯಲ್ಲಿ ಮಧ್ಯಾಹ್ನ ಸುಮಾರು ೩.೩೦ ಗಂಟೆಗೆ ಶಾಲೆಯ ಸಂಗ್ರಹ ಕೋಣೆಗೆ ಹೋಗಿ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆ ಶಾಲಾವಧಿ ಮುಗಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಇದುವರೆಗೂ ಆತ್ಮಹತ್ಯೆಗೆ ಯಾವುದೇ ಕಾರಣ ತಿಳಿದುಬಂದಿಲ್ಲ.ಪ್ರಭಾರಿ ಮುಖ್ಯಶಿಕ್ಷಕ ಆತ್ಮಹತ್ಯೆ ಮಾಡಿಕೊಂಡ ಘಟನೆ ತಿಳಿಯುತ್ತಿದ್ದಂತೆ ಡಿಡಿಪಿಐ, ಕ್ಷೇತ್ರಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘಟನೆಯ ಬಾಂಧವರು, ಶಿಕ್ಷಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಕೋಟ್....ಶಾಲೆಯಲ್ಲಿ ಪ್ರಭಾರಿ ಮುಖ್ಯಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡಿರುವುದು ಖೇದಕರ ಸಂಗತಿ. ಇದು ಸಮಸ್ತ ನೌಕರ ಬಾಂಧವರಿಗೆ ನೋವುಂಟು ಮಾಡಿದೆ. ಈ ಶಿಕ್ಷಕನ ಸಾವಿನ ಕುರಿತು ಸಂಪೂರ್ಣ ತನಿಖೆಯಾಗಬೇಕು. ಈ ಘಟನೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.
-ಶಿವಾನಂದ ಮಂಗಾನವರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು.