ಸಾರಾಂಶ
ಬುಧವಾರ ಕಾರ್ಕಳ ಪುರಸಭೆ ಸಾಮಾನ್ಯ ಸಭೆ ನಡೆಯಿತು. ಪುರಸಭೆ ವ್ಯಾಪ್ತಿ ಬೀದಿ ನಾಯಿಗಳ ಸಂಖ್ಯೆ ಏರಿಕೆ ಕಾಣುತ್ತಿದ್ದು ಏನು ಕ್ರಮ ಕೈಗೊಂಡಿದ್ದೀರಿ ಎಂದು ಸದಸ್ಯರು ಪ್ರಶ್ನಿಸಿದರು.
ಕನ್ನಡಪ್ರಭವಾರ್ತೆ ಕಾರ್ಕಳ
ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆ ಏರಿಕೆ ಕಾಣುತ್ತಿದ್ದು ಏನು ಕ್ರಮ ಕೈಗೊಂಡಿದ್ದೀರಿ ಎಂದು ಕಾರ್ಕಳ ಪುರಸಭಾ ಸದಸ್ಯ ಅಶ್ಪಕ್ ಅಹಮ್ಮದ್ ಪ್ರಶ್ನಿಸಿದರು.ಅವರು ಬುಧವಾರ ಕಾರ್ಕಳ ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ ಈ ಪೈಕಿ 300 ಆರೋಗ್ಯವಂತ ನಾಯಿಗಳ ಸಂತಾನ ಹರಣ ಚಿಕಿತ್ಸೆ ಮಾಡಲಾಗಿದ್ದು ಇನ್ನೂ 700 ನಾಯಿಗಳ ಸಂತಾನ ಹರಣ ಚಿಕಿತ್ಸೆ ಅವಶ್ಯಕತೆಯಿದೆ ಎಂದರು.ಆನೆಕೆರೆಯಲ್ಲಿ ಬಫರ್ ಝೋನ್ ವ್ಯಾಪ್ತಿಯಲ್ಲಿನ ಕಟ್ಟಡಗಳಿಗೆ ಪರವಾನಿಗೆ ನಿಯಮ ಮೀರಿ ಮನೆ ನಂಬರ್ ನೀಡಿದ ಬಗ್ಗೆ ಪುರಸಭಾ ಸದಸ್ಯ ಶುಭದ ರಾವ್ ಮುಖ್ಯಾಧಿಕಾರಿ ರೂಪ ಶೆಟ್ಟಿ ಅವರನ್ನು ತರಾಟೆಗೆ ತೆಗೆದುಕೊಂಡರು.
ಅಶ್ಪಕ್ ಅಹಮ್ಮದ್ ಪುರಸಭೆ ವ್ಯಾಪ್ತಿಯಲ್ಲಿ ವಾಣಿಜ್ಯ ಹಾಗೂ ಮನೆ ತೆರಿಗೆ ಇಳಿಸುವಂತೆ ಮನವಿ ಮಾಡಿದರುಇದಕ್ಕೆ ಉತ್ತರಿಸಿದ ಅಧ್ಯಕ್ಷ ಯೋಗೀಶ್ ದೇವಾಡಿಗ ಸರ್ಕಾರದ ಸೂಚನೆ ಪ್ರಕಾರ ನಿಗದಿಪಡಿಸಲಾಗಿದೆ. ತೆರಿಗೆ ಇಳಿಸಲು ಅವಕಾಶವಿದ್ದರೆ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಪ್ರಾಕೃತಿಕ ವಿಕೋಪದಡಿ ಅನುದಾನ ಹಂಚಿಕೆ ಮಾಡುವಾಗ ಎಲ್ಲ ವಾರ್ಡ್‌ಗಳಿಗೆ ಸಮನಾಗಿ ಹಂಚುವಂತೆ ಹರೀಶ್ ಸಲಹೆ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಮುಖ್ಯಾಧಿಕಾರಿ ಟಿ.ರೂಪಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.