ಸಾರಾಂಶ
ಸಂವಿಧಾನದ 6ನೇ ಪರಿಚ್ಛೇದಕ್ಕೆ ಲಡಾಖ್ ಸೇರ್ಪಡೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ಬೆಂಬಲಿಸಿ ಲಡಾಖ್ ಮೂಲದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ಉಪವಾಸ ಸತ್ಯಾಗ್ರಹ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಸಂವಿಧಾನದ 6ನೇ ಪರಿಚ್ಛೇದಕ್ಕೆ ಲಡಾಖ್ ಸೇರ್ಪಡೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ಬೆಂಬಲಿಸಿ ಲಡಾಖ್ ಮೂಲದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ಉಪವಾಸ ಸತ್ಯಾಗ್ರಹ ಪ್ರತಿಭಟನೆ ನಡೆಸಿದರು.ಇಡೀ ದೇಶದಲ್ಲಿ ವಿಭಿನ್ನವಾದ ವಾತಾವರಣ, ಭೌಗೋಳಿಕ ಪ್ರದೇಶ ಮತ್ತು ಬುಡಕಟ್ಟು ಸಮುದಾಯಗಳು ನೆಲೆಸಿರುವ ಲಡಾಖ್ ಅನ್ನು ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸಬೇಕು. ಅಭಿವೃದ್ಧಿ ಹೆಸರಿನಲ್ಲಿ ಲಡಾಖ್ ಪ್ರದೇಶದಲ್ಲಿ ಆಗುತ್ತಿರುವ ಪರಿಸರ ಹಾನಿಯನ್ನು ತಪ್ಪಿಸಬೇಕು ಎಂದು ಸೋನಂ ವಾಂಗ್‌ಚುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಹೋರಾಟಕ್ಕೆ ಬೆಂಬಲಿಸುವುದಾಗಿ ಪ್ರತಿಭಟನೆಕಾರರು ಹೇಳಿದರು.
ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶ ಮಾಡುವಾಗ ಲಡಾಖ್‌ಗೆ ರಾಜ್ಯದ ಸ್ಥಾನಮಾನದ ಭರವಸೆ ನೀಡಲಾಗಿತ್ತು. ನಂತರ ಆ ಭರವಸೆ ಹುಸಿಯಾಗಿದೆ.ಲಡಾಖ್ ಪರಿಸರವನ್ನು ಉಳಿಸುವ ಜೊತೆಗೆ ಈ ಭಾಗದ ಮೂಲನಿವಾಸಿಗಳ ಜೀವನ ಗುಣಮಟ್ಟ ಸುಧಾರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.