ಸಾರಾಂಶ
ಅಂಶಿ ಪ್ರಸನ್ನಕುಮಾರ್‌ಕನ್ನಡಪ್ರಭ ವಾರ್ತೆ ಮೈಸೂರುಸಕಾಲದಲ್ಲಿ ಚುನಾವಣೆ ನಡೆಸದಿರುವುದರಿಂದ ರಾಜ್ಯದ 43 ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದ 15ನೇ ಹಣಕಾಸು ಆಯೋಗದಿಂದ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಕ್ಕೆ ಅಡ್ಡಿಯಾಗಿದೆ.43 ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಸದಸ್ಯರು ಇಲ್ಲದೇ ಇರುವುದರಿಂದ ಕೇಂದ್ರದ 15ನೇ ಹಣಕಾಸು ಆಯೋಗದ ಅನುದಾನ ಪಡೆಯಲು ಮಾರ್ಗಸೂಚಿ ಅನ್ವಯ ಅರ್ಹರಾಗುವುದಿಲ್ಲ. ಆದ್ದರಿಂದ ಈ 43 ಸ್ಥಳೀಯ ಸಂಸ್ಥೆಗಳಿಗೆ ಹಣ ಬಿಡುಗಡೆ ಆಗದೇ ಇರಬಹುದು. ಆದ್ದರಿಂದ 2024-25ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದ ಅನುದಾನಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿಯನ್ನು ಅನುದಾನ ಬಿಡುಗಡೆಯಾಗುವವರೆಗೆ ಕೈಗೊಳ್ಳದಂತೆ ಪೌರಾಡಳಿತ ನಿರ್ದೇಶಕರು ಸೂಚಿಸಿದ್ದಾರೆ.ಅವರು ಈ ಸಂಬಂಧ ಮೈಸೂರು, ತುಮಕೂರು ಹಾಗೂ ಶಿವಮೊಗ್ಗ ಮಹಾ ನಗರಪಾಲಿಕೆಗಳ ಆಯುಕ್ತರು, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ, ಕಲಬುರಗಿ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸುತ್ತೋಲೆ ಕಳುಹಿಸಿದ್ದಾರೆ. ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಮಾಹಿತಿ ರವಾನಿಸಿದ್ದಾರೆ.ಸರ್ಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜ.18 ರಂದು ನಡೆದ ಯೋಜನಾ ನಿರ್ದೇಶಕರ ಸಭೆಯಲ್ಲಿ ಸೂಚಿಸಿದಂತೆ ಈ ಸುತ್ತೋಲೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.ಚುನಾವಣೆ ನಡೆಯದ ಸ್ಥಳೀಯ ಸಂಸ್ಥೆಗಳುಮೈಸೂರು, ತುಮಕೂರು, ಶಿವಮೊಗ್ಗ ನಗರಪಾಲಿಕೆ, ಬೆಂಗಳೂರು ನಗರ ಜಿಲ್ಲೆಯ ಮಾದನಾಯಕನಹಳ್ಳಿ ಹಾಗೂ ಮೈಸೂರಿನ ಹೂಟಗಳ್ಳಿ ನಗರಸಭೆ, ಬೆಳಗಾವಿಯ ಘಟಪ್ರಭ, ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ, ಬೊಮ್ಮಸಂದ್ರ, ಚಿಕ್ಕಬಾಣಾವರ, ಹುಣಸಮಾರನಹಳ್ಳಿ. ಕೋಣಪ್ಪನ ಅಗ್ರಹಾರ,, ದೊಡ್ಡತೋಗೂರು, ಕಲಬುರಗಿ ಜಿಲ್ಲೆಯ ವಾಡಿ ಪುರಸಭೆ, ಬಾಗಲಕೋಟೆ ಜಿಲ್ಲೆಯ ಲೋಕಾಪುರ, ಶಿರೂರು, ಅಂಕಲಗಿ, ಬೆಳಗಾವಿ ಜಿಲ್ಲೆಯ ಕಬ್ಬೂರು, ಕಾಗವಾಡ,, ಮಚ್ಚೆ, ಪೀರನ್‌ವಾಡಿ, ಯರಗಟ್ಟಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಶೆಟ್ಟಿಹಳ್ಳಿ, ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ, ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ, ಕಡಬ, ಕಿನ್ನಿಗೋಳಿ, ದಾವಣಗೆರೆ ಜಿಲ್ಲೆ ನ್ಯಾಮತಿ, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ, ಕಲಬುರಗಿ ಜಿಲ್ಲೆಯ ಕಲಗಿ, ಕಮಲಾಪುರ- ಕೆಬಿಜಿ, ಯಡ್ರಾಮಿ, ಕೋಲಾರ ಜಿಲ್ಲೆಯ ವೇಮಗಲ್-ಕುರಗಲ್, ಮೈಸೂರು ಜಿಲ್ಲೆಯ ಬೋಗಾದಿ, ಕಡಕೊಳ, ರಮ್ಮನಹಳ್ಳಿ, ಶ್ರೀರಾಂಪುರ, ರಾಮನಗರ ಜಿಲ್ಲೆ ಹಾರೋಹಳ್ಳಿ, ಶಿವಮೊಗ್ಗ ಜಿಲ್ಲೆಯ ಅನವಟ್ಟಿ, ಹೊಳೆಹೊನ್ನೂರು, ಉಡುಪಿ ಜಿಲ್ಲೆಯ ಬೈಂದೂರು, ಉತ್ತರ ಕನ್ನಡ ಜಿಲ್ಲೆಯ ಮನಕಿ, ವಿಜಯಪುರ ಜಿಲ್ಲೆಯ ಬಬಲೇಶ್ವರ, ತಿಕೋಟ ಪಟ್ಟಣ ಪಂಚಾಯತ್‌ಗಳು.--- ಕೋಟ್5 ಎಂವೈಎಸ್39ರಾಜ್ಯ ಸರ್ಕಾರ ಸಕಾಲದಲ್ಲಿ ಚುನಾವಣೆ ನಡೆಸದಿರುವುದರಿಂದ 43 ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಯಾಗಿಲ್ಲ. ಈ ಯೋಜನೆಯಲ್ಲಿ ಮೈಸೂರು ನಗರಪಾಲಿಕೆಗೆ 60-70 ಕೋಟಿ ರು. ಬಿಡುಗಡೆಯಾಗುತ್ತಿತ್ತು. ಆದರೆ ಈಗ ಹಣ ಬಿಡುಗಡೆ ಆಗದೇ ಇರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಕ್ರಮಕೈಗೊಂಡು ಚುನಾವಣೆ ನಡೆಸಬೇಕು. - ಶಿವಕುಮಾರ್, ಮಾಜಿ ಮೇಯರ್ ಹಾಗೂ ಬಿಜೆಪಿ ಮುಖಂಡರು, ಮೈಸೂರು