ಸಾರಾಂಶ
- 101 ಸಮುದಾಯಗಳಿಗೂ ಸಾಮಾಜಿಕ ನ್ಯಾಯಕ್ಕಾಗಿ ಸುಪ್ರೀಂ ತೀರ್ಪು: ಆಲೂರು ನಿಂಗರಾಜ
- 16ರಂದು ಸುವರ್ಣಸೌಧ ಎದುರು ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಟನೆ - - - ಕನ್ನಡಪ್ರಭ ವಾರ್ತೆ ದಾವಣಗೆರೆಸುಪ್ರೀಂ ಕೋರ್ಟ್ ತೀರ್ಪಿನಂತೆ ಬೆಳಗಾವಿ ಅಧಿವೇಶನದಲ್ಲೇ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ವಿಷಯ ಪ್ರಸ್ತಾಪಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಆಲೂರು ನಿಂಗರಾಜ ಒತ್ತಾಯಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಸುವರ್ಣ ಸೌಧದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ವಿಚಾರವನ್ನು ರಾಜ್ಯದ ಎಲ್ಲ ಶಾಸಕರು, ಮೀಸಲು ಕ್ಷೇತ್ರದ ಶಾಸಕರು ಪ್ರಸ್ತಾಪಿಸಬೇಕಿದೆ. ಆ ಮೂಲಕ ಪರಿಶಿಷ್ಟ ಜಾತಿಯಲ್ಲೇ ಅತ್ಯಂತ ತುಳಿತಕ್ಕೆ ಒಳಗಾದಂತಹ ಸಮುದಾಯಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದರು.ಒಳಮೀಸಲಾತಿ ಜಾರಿಗಾಗಿ ಡಿ.16ರಂದು ಬೆಳಗಾವಿಯ ಸುವರ್ಣ ಸೌಧ ಎದುರು ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ ಜಿಲ್ಲೆಯಿಂದ ಸುಮಾರು 1 ಸಾವಿರ ಮಾದಿಗ ಸಮಾಜ ಬಾಂಧವರು ಪಾಲ್ಗೊಳ್ಳುತ್ತಿದ್ದೇವೆ. ಒಳಮೀಸಲಾತಿಯು ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕೊಡುತ್ತದೆ. ಈ ಬಗ್ಗೆ ಸುಪ್ರೀ ಕೋರ್ಟ್ ಸಹ ಸ್ಪಷ್ಟ ತೀರ್ಪುನೀಡಿದೆ. ಇಂತಹ ಐತಿಹಾಸಿಕ ತೀರ್ಪು ಬರುವಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳಮೀಸಲಾತಿ ಶಿಫಾರಸು ಮಾಡುವ ನಿರ್ಧಾರ ಮಾಡಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಒಳ ಮೀಸಲಾತಿ ಬೆಂಬಲಿಸಿದ್ದು ಗಮನಾರ್ಹ. ಆ.1ರಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು. ತೀರ್ಪು ಬಂದು 4 ತಿಂಗಳಾದರೂ ರಾಜ್ಯ ಸರ್ಕಾರ ಒಳಮೀಸಲು ಜಾರಿಗೊಳಿಸಿಲ್ಲ. ಕಾಟಾಚಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚಿಸಿದ್ದುಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಾಟಾಚಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚಿಸಿದ್ದುಬಿಟ್ಟರೆ ಬೇರೇನೂ ವ್ಯವಸ್ಥೆಗಳ ಮಾಡಿಲ್ಲ. ಸರ್ಕಾರದ ಈ ವಿಳಂಬ ನೀತಿ ಖಂಡಿಸಿ, ಬೆಳಗಾವಿಯ ಸುವರ್ಣ ಸೌಧ ಎದುರು ಬೃಹತ್ ಪ್ರತಿಭಟನೆ ಮೂಲಕ ಮಾದಿಗ ಸಮುದಾಯವು ಒಳಮೀಸಲಾತಿ ಜಾರಿಗೆ ಒತ್ತಾಯಿಸಲಿದೆ ಎಂದು ನಿಂಗರಾಜ ತಿಳಿಸಿದರು.
ಸಂಘದ ರಾಜು ಶಾಮನೂರು, ಆಲೂರು ಬಸವರಾಜ, ಆನಂದ, ನಿಂಗರಾಜ, ಅವಿನಾಶ, ಅಂಜಿನಪ್ಪ ಶಾಮನೂರು, ಹರೀಶ ಹೊನ್ನೂರು, ಹಾಲೇಶ ಇತರರು ಇದ್ದರು.- - - ಕೋಟ್ ಶೋಷಿತ ವರ್ಗಗಳ ಜಿಲ್ಲಾಧ್ಯಕ್ಷನೆಂದು ಹೇಳಿಕೊಳ್ಳುವ ಬಾಡದ ಆನಂದರಾಜ ಬಿಜೆಪಿ ನಾಯಕರ ವಿರುದ್ಧ ಮಾತನಾಡುವ ಮುನ್ನ ತಮ್ಮ ಯೋಗ್ಯತೆ ಏನೆಂದು ತಿಳಿಯಲಿ. ದಾವಣಗೆರೆ ಬಿಜೆಪಿಯಲ್ಲಿ ಎರಡು ಬಣ ಆಗಿರುವುದು ನಿಜ. ಅದನ್ನು ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ. ನೀವು ಅದನ್ನೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸಬಾರದು - ಆಲೂರು ನಿಂಗರಾಜ, ಹಿರಿಯ ಮುಖಂಡ, ಬಿಜೆಪಿ
- - - -14ಕೆಡಿವಿಜಿ1.ಜೆಪಿಜಿ:ದಾವಣಗೆರೆಯಲ್ಲಿ ಶನಿವಾರ ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಆಲೂರು ನಿಂಗರಾಜ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.