ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ದ್ವಿತೀಯ ಪಿಯು ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಪಟ್ಟಣದ ಆಲ್ಫಾ ಕಾಲೇಜಿನ ಆರ್‌. ಲೋಹಿತ್ (585), ವಾಣಿಜ್ಯ ವಿಭಾಗದಲ್ಲಿ ಬಿ.ಎಸ್‌. ಗೌತಮಿ (590) ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು, ಇವರನ್ನು ಕಾಲೇಜಿನ ಕಾರ್ಯದರ್ಶಿ ಸುಬ್ರಮಣ್ಯ ಅಭಿನಂದಿಸಿದ್ದಾರೆ.

ಕಳೆದ 5-6 ವರ್ಷಗಳಿಂದ ತಾಲೂಕಿನಲ್ಲಿ ಆಲ್ಫಾ ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುತ್ತಿದ್ದು ಮಕ್ಕಳಿಗೆ ಉತ್ತಮ ಫಲಿತಾಂಶಕ್ಕಾಗಿ ನಮ್ಮ ಕಾಳೇಜಿನ ಎಲ್ಲಾ ಉಪನ್ಯಾಸಕರು ಶ್ರಮಿಸುತ್ತಿದ್ದು ಅದಕ್ಕೆ ವಿದ್ಯಾರ್ಥಿಗಳು ಕೂಡ ಸ್ಪಂದಿಸುತ್ತಿರುವುದರಿಂದ ಉತ್ತಮ ಫಲಿತಾಂಶ ಬರಲು ಸಾಧ್ಯವಾಗಿದೆ ಎಂದು ಸಂತಸ ಹಂಚಿಕೊಂಡರು.

2025-26ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಒಟ್ಟು 70 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ಪ್ರಥಮ ಶ್ರೇಣಿಯಲ್ಲಿ 84 ವಿದ್ಯಾರ್ಥಿಗಳು ಮತ್ತು ವಾಣಿಜ್ಯ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ 9 ವಿದ್ಯಾಾರ್ಥಿಗಳು ಮತ್ತು ಪ್ರಥಮ ಶ್ರೇಣಿಯಲ್ಲಿ 23 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಹೇಮಾಶ್ರೀ (574), ಮಹಮದೀರೀರೇನಾ ಮಿರ್ಜಾ (574) ಶದಾಬ್ (576), ರಿತೀಷ (570) ಮತ್ತು ವಾಣಿಜ್ಯ ವಿಭಾಗದಲ್ಲಿ ಪ್ರಜ್ವಲ್‌ ಗೌಡ (582) ಪೂಜಾಸೆರ್ವಿ (568) ಅಂಕಗಳೊಂದಿಗೆ ವಿದ್ಯಾರ್ಥಿಗಳು ತೇರ್ಗಡೆಯಾಗಿ ಆಲ್ಘಾ ಕಾಲೇಜಿಗೆ ಕೀರ್ತಿ ತಂದುಕೊಟ್ಟಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.