ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರಪಟ್ಟಣದ ಪಿಎಲ್.ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಂಟು ಮಂದಿ ಆಯ್ಕೆಯಾಗಿದ್ದು, ಎರಡನೇ ಬಾರಿ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ.14 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮೂವರು ಅವಿರೋಧ ಆಯ್ಕೆಯಾಗಿದ್ದರು, ಇದರ ಜತೆಗೆ ಸೋಮವಾರ ನಡೆದ ಮತ ಎಣಿಕೆಯಲ್ಲಿ ಐವರು ಚುನಾಯಿತರಾಗಿದ್ದು, ಅಧಿಕಾರ ನಡೆಸಲು ಅಗತ್ಯವಿರುವ ಸಂಖ್ಯೆ ತಲುಪಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಬೆಂಬಲಿತರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇವರೊಂದಿಗೆ ನಾಲ್ವರು ಜೆಡಿಎಸ್ ಪಕ್ಷದ ಬೆಂಬಲಿತರು ಆಯ್ಕೆಯಾಗಿದ್ದು ಜತೆಗೆ ಇಬ್ಬರು ಪಕ್ಷೇತರರು ಚುನಾಯಿತರಾಗಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಿಪಂ ಮಾಜಿ ಸದಸ್ಯೆ ಪುಷ್ಪಲತಾ ರಮೇಶ್ (283) ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿಯಾಗಿದ್ದ ಪುರಸಭೆ ಸದಸ್ಯ ಉಮೇಶ್ ಅವರನ್ನು 125 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.ಉಳಿದಂತೆ ಸಾಲಗಾರರ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾಗಿ ಕಣದಲ್ಲಿದ್ದ ಕುಳ್ಳ ಬೋರೇಗೌಡ (55), ಚಂದ್ರೇಗೌಡ (51), ಚಂದ್ರಹಾಸ (65), ಎಚ್.ಕೆ. ಪ್ರದೀಪ್ ಕುಮಾರ್ (56) ಆಯ್ಕೆಯಾಗಿದ್ದು, ಜೆಡಿಎಸ್ ಬೆಂಬಲಿತರಾಗಿ ಸ್ಪರ್ಧೆ ಮಾಡಿದ್ದ ಎಸ್.ಎಂ. ಸೋಮಣ್ಣ (25), ದೊಡ್ಡಯ್ಯ (58), ರಮೇಶ್ ನಾಯಕ (76), ಗಾಯತ್ರಮ್ಮ (54) ಚುನಾಯಿತರಾಗಿದ್ದಾರೆ. ಪಕ್ಷೇತರರಾಗಿ ಅಖಾಡದಲ್ಲಿದ್ದ ಎಂ.ಎಸ್. ಹರಿಚಿದಂಬರ (62), ಮಹೇಶ್ (61) ನಿರ್ದೇಶಕರಾಗಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಬೆಂಬಲಿತರಾಗಿ ಮಂಗಳಪ್ರಸಾದ್, ಇಂದ್ರೇಶ್, ಡಿ.ಆರ್. ರಾಹುಲ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಪುರಸಭೆ ಅಧ್ಯಕ್ಷ ಶಿವುನಾಯಕ್, ಸದಸ್ಯರಾದ ನಟರಾಜು, ಶಂಕರ್ ಸ್ವಾಮಿ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ಸಿ.ಪಿ. ರಮೇಶ್ ಕುಮಾರ್, ತಾಪಂ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಎಪಿಎಂಎಸಿ ಮಾಜಿ ಅಧ್ಯಕ್ಷ ನಟರಾಜು, ಪಿಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಸಿ. ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್, ಉದಯಶಂಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ರಮೇಶ್, ವಕ್ತಾರ ಸೈಯದ್ ಜಾಬೀರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ. ಶಿವಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ದಿಲೀಪ್ ಕುಮಾರ್ ಇದ್ದರು.