ಸಾರಾಂಶ
ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿ ಕರ್ನಲ್ ನಾಯಡ ಬಿ ಚಿನ್ನಪ್ಪ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ನಾಯಕತ್ವ ಮತ್ತು ಸಂಘ ಆಯೋಜಿಸುವ ವಿವಿಧ ಚಟುವಟಿಕೆಯಲ್ಲಿ ಭಾಗಿಯಾಗುವ ಮೂಲಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಿವಿ ಮಾತನ್ನು ಹೇಳಿ ಶುಭ ಹಾರೈಸಿದರು.
ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚೌರಿರ ಡಾ ಜಗತ್ ತಿಮ್ಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ವೇಣು ಅಪ್ಪಣ್ಣ, ನಿರ್ದೇಶಕರಾದ ಹರೀಶ್ ದೇವಯ್ಯ, ಪ್ರಾಂಶುಪಾಲರಾದ ದೇವಕಿ , ಬೋಧಕರು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗಿಯಾಗಿದ್ದರು.