ಸಾರಾಂಶ
ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳು ಹೆಚ್ಚಾಗಿ ಅರಣ್ಯ ಪ್ರದೇಶವನ್ನು ಒಳಗೊಂಡಿವೆ.
ಕನ್ನಡಪ್ರಭ ವಾರ್ತೆ ಮೈಸೂರು
ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ ಅರಣ್ಯಶಾಸ್ತ್ರದ ಪದವಿ ಕಾಲೇಜನ್ನು ಆರಂಭಿಸುವಂತೆ ಒತ್ತಾಯಿಸಿ ವಿಧಾನ ಪರಿಷತ್‌ಸದಸ್ಯ ಕೆ. ವಿವೇಕಾನಂದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳು ಹೆಚ್ಚಾಗಿ ಅರಣ್ಯ ಪ್ರದೇಶವನ್ನು ಒಳಗೊಂಡಿವೆ. ಜಿಲ್ಲೆಯು 3,730.59 ಚದಜರ ಕಿಮೀ., ಚಾಮರಾಜನಗರ ಜಿಲ್ಲೆಯು 2,467 ಚ.ಕಿ.ಮೀ., ಹಾಸನ ಜಿಲ್ಲೆಯು 509.76 ಚ.ಕಿ.ಮೀ, ಮಂಡ್ಯ ಜಿಲ್ಲೆಯು 271.528 ಚ.ಕಿ.ಮೀ. ವ್ಯಾಪ್ತಿಯ ಅರಣ್ಯ ಪ್ರದೇಶ ಹೊಂದಿದೆ.
ಈ ಜಿಲ್ಲೆಗಳ ವ್ಯಾಪ್ತಿಗೆ ರಾಷ್ಟ್ರೀಯ ವನ್ಯಜೀವಿ ಅರಣ್ಯ ಪ್ರದೇಶವು ಸೇರಿದೆ. ಪ್ರಸ್ತುತ ಪರಿಸರಕ್ಕೆ ಪೂರಕವಾದ ವಾತಾವರಣ ನಿರ್ಮಿಸಬೇಕಿರುವುದು ನಮ್ಮ ಜವಾಬ್ದಾರಿ. ಅದರಲ್ಲಿಯೂ ಕಾಡು, ನದಿ, ವನ್ಯಜೀವಿ ಒಟ್ಟಾರೆ ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆ ಉಳಿಸಿ ಬೆಳೆಸಿಕೊಂಡು ಹೋಗಬೇಕಿರುವುದು ಅತಿ ಅಗತ್ಯ.ಇದನ್ನು ಗಮನದಲ್ಲಿಟ್ಟುಕೊಂಡು ಅರಣ್ಯಶಾಸ್ತ್ರದ ಪದವಿ ಕಾಲೇಜನ್ನು ಆರಂಭಿಸಿ, ಯುವಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.