ನಾಳೆ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ

| Published : Jan 30 2024, 02:01 AM IST

ಸಾರಾಂಶ

ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಜ.31 ರಂದು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ನಿಯೋಜಿತ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜಶೆಟ್ಟಿ ಹೇಳಿದರು.

ಚಿಕ್ಕಮಗಳೂರು: ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಜ.31 ರಂದು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ನಿಯೋಜಿತ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜಶೆಟ್ಟಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಆಗಮಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರನ್ನು ಬೆಳಿಗ್ಗೆ 10.30 ಕ್ಕೆ ನಗರದ ಬೋಳರಾಮೇಶ್ವರ ದೇವಾಲಯದ ಬಳಿ ಸ್ವಾಗತಿಸಲಾಗುವುದು ಎಂದರು. ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕರಾದ ಸಿ.ಟಿ. ರವಿ, ಡಿ.ಎನ್. ಜೀವರಾಜ್, ಬೆಳ್ಳಿಪ್ರಕಾಶ್, ಡಿ.ಎಸ್. ಸುರೇಶ್ ಸೇರಿದಂತೆ ವಿವಿಧ ಮಂಡಲಗಳ ಪ್ರಮುಖರು ಸೇರಿದಂತೆ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ವಕ್ತಾರ ಟಿ.ರಾಜಶೇಖರ್ ಮಾತನಾಡಿ, ಇತ್ತೀಚೆಗೆ ಜರುಗಿದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು ಏಕವಚನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಮಧುಕುಮಾರ್‌ ರಾಜ್‌ ಅರಸ್, ಮುಖಂಡರಾದ ದಿನೇಶ್, ಸಚ್ಚಿನ್‌ ಇದ್ದರು.

ಪೋಟೋ ಫೈಲ್‌ ನೇಮ್‌ 29 ಕೆಸಿಕೆಎಂ 7