Inauguration of an electricity substation at Khanderayanapalli

ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಚಾಲನೆ । ಸಮರ್ಪಕ ವಿದ್ಯುತ್‌ ಪೂರೈಕೆಯಿಂದ ಕೃಷಿಗೆ ಅನುಕೂಲ

-------

ಕನ್ನಡಪ್ರಭ ವಾರ್ತೆ ಕಲಬುರಗಿ/ ಸೇಡಂ ಸೇಡಂ ತಾಲೂಕಿನ ಖಂಡೇರಾಯನಪಲ್ಲಿ ಗ್ರಾಮದಲ್ಲಿ ₹8.3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 33/11 ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ ನೀಡಿದರು. ಈ ಉಪಕೇಂದ್ರದಿಂದ ಖಂಡೇರಾಯನಪಲ್ಲಿ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳು ಮತ್ತು ತಾಂಡಾಗಳ ರೈತರಿಗೆ ಕೃಷಿ ಚಟುವಟಿಕೆಗಳಿಗೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಯಾಗಲಿದ್ದು, ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.ಸೇಡಂ ಮತಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಉಪಕೇಂದ್ರಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಮುಧೋಳ ಹಾಗೂ ಮದನಾ ಗ್ರಾಮಗಳಲ್ಲಿ ವಿದ್ಯುತ್ ಉಪಕೇಂದ್ರಗಳು ಕಾರ್ಯಾರಂಭ ಮಾಡಿದ್ದು, ಕಾಚೂರು ಭಾಗದಲ್ಲಿ ನೂತನ ವಿದ್ಯುತ್ ಉಪಕೇಂದ್ರದ ಕಾಮಗಾರಿ ಆರಂಭಿಸಲಾಗಿದೆ.ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟು, ಸರ್ಕಾರದಿಂದ ದೊರೆಯುವ ಅನುದಾನ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳಿಗೆ ಸದ್ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆ, ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಹಾಗೂ ವಿದ್ಯುತ್ ವಿತರಣಾ ವ್ಯವಸ್ಥೆ ಸುಧಾರಣೆ ಮಾಡುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

-----ಬಾಕ್ಸ್-------ಎತ್ತಿನ ಬಂಡಿ ಏರಿದ ಸಚಿವ ಪಾಟೀಲಸೇಡಂ: ರೈತರ ಅನುಕೂಲಕ್ಕಾಗಿ ನಿರ್ಮಿಸಲಾದ ಖಂಡೇರಾಯನಪಲ್ಲಿ ಗ್ರಾಮದ 33/11 ಕೆ.ವಿ. ವಿದ್ಯುತ್ ಉಪಕೇಂದ್ರದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರನ್ನು ರೈತರು ಎತ್ತಿನ ಬಂಡಿಯಲ್ಲಿ ಕರೆತಂದು ವಿಶಿಷ್ಟವಾಗಿ ಸ್ವಾಗತಿಸಿದರು. ತಮ್ಮ ನೆಚ್ಚಿನ ನಾಯಕನನ್ನು ಎತ್ತಿನ ಬಂಡಿಯಲ್ಲಿ ಕೂರಿಸಿ ಕಾರ್ಯಕ್ರಮಕ್ಕೆ ಕರೆತಂದ ರೈತರ ಸಂಭ್ರಮ ಗಮನ ಸೆಳೆಯಿತು. ಈ ವೇಳೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಸ್ವತಃ ಎತ್ತಿನ ಬಂಡಿ ಏರಿ, ಬಾರುಕೋಲು ಹಿಡಿದು ಎತ್ತುಗಳನ್ನು ಮುಂದೆ ಸಾಗಿಸುತ್ತಾ ಬಂಡಿ ಓಡಿಸಿದ ದೃಶ್ಯ ನೆರೆದಿದ್ದವರಲ್ಲಿ ಹರ್ಷ ಮೂಡಿಸಿತು. ರೈತರೊಂದಿಗೆ ಬೆರೆತು ಸಂಭ್ರಮಿಸಿದ ಸಚಿವರ ಸರಳ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

-----ಫೋಟೊ-------ಫೋಟೋ- ಖಂಡೆರಾಯನ ಪಲ್ಲಿ 1

ಖಂಡೇರಾಯನಪಲ್ಲಿ ಗ್ರಾಮದ 33/11 ಕೆ.ವಿ. ವಿದ್ಯುತ್ ಉಪಕೇಂದ್ರದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲರನ್ನು ರೈತರು ಎತ್ತಿನ ಬಂಡಿ ಮೂಲಕ ಕರೆದೊಯ್ದರು.*ಖಂಡೇರಾಯಮನ ಪಲ್ಲಿ 2

ಖಂಡೇರಾಯನಪಲ್ಲಿ ಗ್ರಾಮದಲ್ಲಿ ₹8.3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 33/11 ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ ನೀಡಿದರು. ಸಂಸದ ರಾಧಾಕೃಷ್ಣ ದೊಡ್ಡಮನಿ ಹಾಗೂ ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ ಇತರರಿದ್ದರು.