ಪುತ್ತಿಗೆ ಪರ್ಯಾಯ: ಅನಂತ ದ್ವಾರ ಮಂಟಪ ಉದ್ಘಾಟನೆ

| Published : Dec 15 2023, 01:30 AM IST

ಸಾರಾಂಶ

ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಬೆಳಗ್ಗೆ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಉಡುಪಿ: ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಬೆಳಗ್ಗೆ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಇದೇ ಸಂದರ್ಭದಲ್ಲಿ ಶ್ರೀಗಳು ರಥಬೀದಿಯಲ್ಲಿ ಪರ್ಯಾಯೋತ್ಸವದ ಅಂಗವಾಗಿ ನಿರ್ಮಿಸಲಾಗಿರುವ ‘ಅನಂತ ದ್ವಾರ’ ಮಂಟಪವನ್ನು ಉದ್ಘಾಟಿಸಿದರು. ಈ ಉತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಶ್ರದ್ಧಾಭಕ್ತಿಯಿಂದ ಭಾಗವಹಿಸಿದ್ದರು.