ನಾಳೆ ಚಾಮರಾಜನಗರದಲ್ಲಿ ಅರುಂಧತಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ

| Published : Sep 21 2024, 01:57 AM IST

ನಾಳೆ ಚಾಮರಾಜನಗರದಲ್ಲಿ ಅರುಂಧತಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಅರುಂಧತಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭವನ್ನು ಸೆ.22 ರಂದು ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಅರಕಲವಾಡಿ ಜವರಯ್ಯ ಮನವಿ ಮಾಡಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಅರುಂಧತಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭವನ್ನು ಸೆ.22 ರಂದು ಭಾನುವಾರ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸಮುದಾಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಅರಕಲವಾಡಿ ಜವರಯ್ಯ ಮನವಿ ಮಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗುವ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀ ಸುತ್ತೂರು ಕ್ಷೇತ್ರದ ಶ್ರೀವೀರ ಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಹಾಗೂ ಚಿತ್ರದುರ್ಗಾ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ, ಚಿತ್ರದುರ್ಗಾ ಜಿಲ್ಲೆಯ ಹಿರಿಯೂರು ತಾಲೂಕು ಶ್ರೀಮಹಾಶಿವಶರಣ ಹರಳಯ್ಯ ಗುರುಪೀಠ, ಐಮಂಗಲದ ಶ್ರೀಬಸವ ಹರಳಯ್ಯ ಸ್ವಾಮೀಜಿ, ಸಿದ್ದಮಲ್ಲೇಶ್ವರ ವಿರಕ್ತ ಮಠಾಧ್ಯಕ್ಷ ಶ್ರೀ ಚನ್ನಬಸವಸ್ವಾಮೀಜಿ, ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿಮಠದ ಗುರುಹರಳಯ್ಯಸ್ವಾಮಿಜೀ ವಹಿಸಲಿದ್ದಾರೆ.

ಮಾಜಿ ಕೇಂದ್ರ ಸಚಿವ ನಾರಾಯಣಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ. ಸಂಸದ ಸುನೀಲ್ ಬೋಸ್ ಸೊಸೈಟಿ ಲೋಗೋ ಬಿಡುಗಡೆ ಮಾಡಲಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಧರ್ಮಸೇನಾ ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಶಿವಪ್ರಸಾದ್ ಪುಷ್ಪಾರ್ಚನೆ ಮಾಡುವರು ಎಂದರು.

ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮೈಸೂರು ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಆರ್.ವಿನಯ್‌ ಕುಮಾರ್, ಸಹಕಾರ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ಎಂ.ಮಹದೇವಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ಮುನಿರಾಜ್, ಸಹಕಾರ ಇಲಾಖೆ ಉಪನಿಬಂಧಕ ಜಿ.ಸಿ.ಜ್ಯೋತಿ ಅರಸ್, ವಿಶೇಷ ಆಹ್ವಾನಿತರಾಗಿ ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ಗು.ನಾಗರಾಜ್, ಬೆಂಗಳೂರು ಪ್ರಥಮ ದರ್ಜೆ ಗುತ್ತಿಗೆದಾರ ಎಂ.ಮಹದೇವಸ್ವಾಮಿ, ತಾಲೂಕು ಬಿಸಿಎಂ ಅಧಿಕಾರಿ ಲಿಂಗರಾಜು, ತೆರಕಣಾಂಬಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಮಹದೇವಸ್ವಾಮಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹಸಗೂಲಿ ಸಿದ್ದಯ್ಯ, ಮುಖ್ಯಕಾರ್ಯನಿರ್ವಾಹಕ ಶಿವಕುಮಾರ್, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ಗು.ನಾಗರಾಜು, ಪ್ರವರ್ತಕರಾದ ಅರಕಲವಾಡಿ ಮಹದೇವಯ್ಯ, ಮೂಡಳ್ಳಿಮೂರ್ತಿ, ಸಿ.ಚನ್ನಬಸವಯ್ಯ, ನಿರ್ದೇಶಕರಾದ ಎಚ್.ಎಚ್.ನಾಗರಾಜು, ಎಂ.ಶಿವಕುಮಾರ್ ಹಾಜರಿದ್ದರು.