ಸೇವೆಯ ದೆಸೆಯಿಂದ ಕೊಲ್ಹಾರ ಪಟ್ಟಣದಲ್ಲಿ ಸಕಲ ಸೌಲಭ್ಯಗಳುಳ್ಳ ಚಿಕ್ಕ ಮಕ್ಕಳ ಆಸ್ಪತ್ರೆ ತೆರೆದಿದ್ದು. ಅತಿ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಆಸ್ಪತ್ರೆ ಪ್ರಾರಂಭಿಸಲಾಗಿದೆ. ಕಾರಣ ಕೊಲ್ಹಾರ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಮುಖ್ಯಸ್ಥರು ಹಾಗೂ ಹಿರಿಯ ಚಿಕ್ಕ ಮಕ್ಕಳ ತಜ್ಞ ಡಾ ಎಲ್.ಎಚ್ ಬಿದರಿ ಹೇಳಿದರು.
ಕನ್ನಡಪ್ರಭ ವಾರ್ತೆ ಕೊಲ್ಹಾರ
ಸೇವೆಯ ದೆಸೆಯಿಂದ ಕೊಲ್ಹಾರ ಪಟ್ಟಣದಲ್ಲಿ ಸಕಲ ಸೌಲಭ್ಯಗಳುಳ್ಳ ಚಿಕ್ಕ ಮಕ್ಕಳ ಆಸ್ಪತ್ರೆ ತೆರೆದಿದ್ದು. ಅತಿ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಆಸ್ಪತ್ರೆ ಪ್ರಾರಂಭಿಸಲಾಗಿದೆ. ಕಾರಣ ಕೊಲ್ಹಾರ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಮುಖ್ಯಸ್ಥರು ಹಾಗೂ ಹಿರಿಯ ಚಿಕ್ಕ ಮಕ್ಕಳ ತಜ್ಞ ಡಾ ಎಲ್.ಎಚ್ ಬಿದರಿ ಹೇಳಿದರು.ಪಟ್ಟಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಿದರಿ ಚಿಕ್ಕ ಮಕ್ಕಳ ಅಶ್ವಿನಿ ಆಸ್ಪತ್ರೆಯ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಸ್ಪತ್ರೆ ಉದ್ಘಾಟಿಸಿ ನಿವೃತ್ತ ವೈದ್ಯ ಎ.ಆರ್. ಬೆಳ್ಳುಬ್ಬಿ ಮಾತನಾಡಿ, ಕೊಲ್ಹಾರಕ್ಕೆ ಚಿಕ್ಕ ಮಕ್ಕಳ ಆಸ್ಪತ್ರೆ ಅತಿ ಅವಶ್ಯವಾಗಿರುವುದನ್ನು ಮನಗಂಡು ಡಾ.ಎಲ್.ಎಚ್ ಬಿದರಿಯವರು ಪಟ್ಟಣದಲ್ಲಿ ಚಿಕ್ಕಮಕ್ಕಳ ಆಸ್ಪತ್ರೆ ಪ್ರಾರಂಭಿಸಿದ್ದಾರೆ. ವೈದ್ಯ ವೃತ್ತಿ ಅತಿ ಪವಿತ್ರವಾಗಿದ್ದು, ಅಂತಹ ವೃತ್ತಿಯನ್ನು ದಶಕಗಳಿಂದ ಮಾಡುತ್ತಿರುವ ಬಿದರಿ ಅವರ ಕಾರ್ಯ ಶ್ಲಾಘನೀಯ ಎಂದರು.ಡಾ.ಅಮೋಘ ಎಲ್.ಬಿದರಿ, ಡಾ.ಅಪರ್ಣಾ ಎ.ಬಿದರಿ ಸಹಿತ ಇನ್ನಿತರರು ಉಪಸ್ಥಿತರಿದ್ದರು.