ಸಾರಾಂಶ
ದೊಡ್ಡಬಳ್ಳಾಪುರ: ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕಿನ ಶಾಖೆಗಳನ್ನು ತೆರೆದು ಆ ಭಾಗದಲ್ಲಿ ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ನಡೆಸುವ ಮೂಲಕ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಧುಕರ್ ಶೆಟ್ಟಿ ತಿಳಿಸಿದರು.
ದೊಡ್ಡಬಳ್ಳಾಪುರ: ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕಿನ ಶಾಖೆಗಳನ್ನು ತೆರೆದು ಆ ಭಾಗದಲ್ಲಿ ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ನಡೆಸುವ ಮೂಲಕ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಧುಕರ್ ಶೆಟ್ಟಿ ತಿಳಿಸಿದರು. ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಬ್ಯಾಂಕ್ ಖಾತೆಗಳನ್ನು ಹೊಂದುವುದು ಮುಖ್ಯ ಎಂದರು.
ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರ ಮಾಡಬಹುದಾಗಿದೆ. ಗೃಹ, ವಾಣಿಜ್ಯ, ಕೃಷಿ, ಹೈನುಗಾರಿಕೆ ಸೇರಿದಂತೆ ವಿವಿಧ ಸಾಲಸೌಲಭ್ಯಗಳು ಬ್ಯಾಂಕ್‌ನಲ್ಲಿ ಲಭ್ಯವಿದ್ದು, ಶೂನ್ಯ ಮೊತ್ತದ ಖಾತೆಗಳನ್ನು ತೆರೆಯಲು ಅವಕಾಶವಿದೆ. ಈ ಮೂಲಕ ಸರ್ಕಾರದ ಅನುದಾನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಬಹುದಾಗಿದೆ ಎಂದು ತಿಳಿಸಿದರು.ಪ್ರಬಂಧಕ ವ್ಯವಸ್ಥಾಪಕ ಮಹೇಶ್ ಪೈ, ವೆಂಕಟರಾಮುಲು, ಉದಯ್ ಕಿರಣ್ ಇತರರು ಉಪಸ್ಥಿತರಿದ್ದರು.
ಫೋಟೋ-18ಕೆಡಿಬಿಪಿ3- ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಧುಕರ್ ಶೆಟ್ಟಿ ಮಾತನಾಡಿದರು.