ಕನ್ನಡಪ್ರಭ ವಾರ್ತೆ ರಾಮನಾಥಪುರ

ಕ್ರೀಡೆಯ ಜೊತೆ ಉನ್ನತ ವಿದ್ಯಾಭ್ಯಾಸ ಪಡೆದು ಮುಂದಿನ ಜೀವನ ರೂಪಿಸಿಕೊಳ್ಳುವಂತೆ ಯುವಕರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ. ಮಂಜು ಸಲಹೆ ನೀಡಿದರು.

ಹಳ್ಳಿಮೈಸೂರು ಹೋಬಳಿಯ ಕೆರಗೋಡು ಗ್ರಾಮದ ಪದವಿಪೂರ್ವ ಕಾಲೇಜಿನ ಕ್ರೀಡೆ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಶಾಸಕರಾದ ಮಂಜು ಅವರು ಭಾಗವಹಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಹದಿಹರೆಯದ ವಯಸ್ಸಿನಲ್ಲಿ ವಿವಿಧ ರೀತಿಯ ಅಕರ್ಷಣೆಗೆ ಒಳಗಾಗದೇ ಗುರಿಯತ್ತ ಗಮನಹರಿಸಿ, ನಿರಂತರ ಶ್ರಮ ವಹಿಸಿ ವಿದ್ಯೆ ಕಡೆ ಗಮನಹರಿಸಬೇಕು. ಸಮಾಜದ ಭದ್ರ ಬುನಾದಿ ಶಿಕ್ಷಣದಿಂದ ಮಾತ್ರ ಸಾಧ್ಯ. ಇಡೀ ದೇಶದ ಬದಲಾವಣೆ ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣವೇ ಶಕ್ತಿ, ಶಿಕ್ಷಣ ಪ್ರತಿಯೊಬ್ಬರ ಹಕ್ಕು ಪ್ರತಿಯೊಬ್ಬರು ಉನ್ನತ ಶಿಕ್ಷಣ ಪಡೆದು ಜೀವನ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿ ಎಲ್ಲಾ ಸದಸ್ಯರು, ಪೋಷಕರು ಇದ್ದರು.