ಸಾರಾಂಶ
ನಗರದ ಗುರುಕುಲ ರಸ್ತೆಯಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಗುರುಕುಲ ರಸ್ತೆಯಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ಕಾರ್ಯಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರ ಚುನಾವಣೆ ಪ್ರಚಾರ ಚಟುವಟಿಕೆಗಳಿಗಾಗಿ ಈ ಕಾರ್ಯಾಲಯ ಪ್ರಾರಂಭಿಸಲಾಗಿದೆ ಎಂದರು. ಈ ವೇಳೆ ವಿಧಾನ ಪರಿಷತ ಸದಸ್ಯ ಪ್ರಕಾಶ ರಾಠೋಡ, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ, ಉಪಾಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಡಾ. ಮಕ್ಬೂಲ ಬಾಗವಾನ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ್ ಮುಶ್ರಿಫ್, ವಸಂತ ಹೊನಮೋಡೆ, ಹೊನಮಲ್ಲ ಸಾರವಾಡ, ಸುರೇಶಗೌಡ ಪಾಟೀಲ, ಚಂದ್ರಕಾಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.