ಸಾರಾಂಶ
ನೂತನ ಡಯಾಲಿಸಿಸ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಕುಶಾಲನಗರ ಸಮುದಾಯಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಭಾಗವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ತಾಲೂಕು ಆಡಳಿತ, ಕುಶಾಲನಗರ ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ನೂತನ ಡಯಾಲಿಸಿಸ್ ಘಟಕ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಕುಶಾಲನಗರ ಪುರಸಭೆಯ ಆಡಳಿತಾಧಿಕಾರಿ ವಿನಾಯಕ ನರ್ವಾಡೆ, ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ, ಕುಶಾಲನಗರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.