ಡಾ.ಬಿ.ಆರ್‌.ಅಂಬೇಡ್ಕರ್‌ ಸಭಾಭವನ ಉದ್ಘಾಟನೆ

| Published : Sep 25 2025, 01:02 AM IST

ಸಾರಾಂಶ

ಇಟ್ಟಮೇರಿಯಲ್ಲಿ ನಿರ್ಮಿತ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನವನ್ನು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಬೆಳ್ಮಣ್ ಭಾಗದ ಬಹುಕಾಲದ ಬೇಡಿಕೆಗೆ ಯಾದ ಇಟ್ಟಮೇರಿಯಲ್ಲಿ ನಿರ್ಮಿತ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನವನ್ನು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು.ಸುಮಾರು ೬ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಈ ಭವನವು ಸಮುದಾಯದ ಚಟುವಟಿಕೆಗಳಿಗೆ ಅನುಕೂಲವಾಗಲಿ ಎಂಬ ಹಾರೈಕೆಯನ್ನೂ ಅವರು ವ್ಯಕ್ತಪಡಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಮೇಶ್ವರಿ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸಂದೀಪ್ ಅಂಚನ್, ಮಾಜಿ ಉಪಾಧ್ಯಕ್ಷೆ ಸಹಾನ ಕುಂದರ್ ಸೂಡಾ, ಮಾಜಿ ಜಿ.ಪಂ. ಸದಸ್ಯೆ ರೇಶ್ಮಾ ಉದಯ್ ಶೆಟ್ಟಿ, ಮಾಜಿ ತಾ.ಪಂ ಸದಸ್ಯೆ ಆಶಾ ದೇವೇಂದ್ರ ಶೆಟ್ಟಿ, ಸೂರ್ಯಕಾಂತ್ ಶೆಟ್ಟಿ ಕೆದಿಂಜೆ, ದೇವೇಂದ್ರ ಶೆಟ್ಟಿ, ಬೋಳ ಸತೀಶ್ ಪೂಜಾರಿ, ರವೀಂದ್ರ ಶೆಟ್ಟಿ ಮುಲ್ಲಡ್ಕ ಮತ್ತಿತರರಿದ್ದರು.

ಗ್ರಾ.ಪಂ ಸದಸ್ಯ ಅಶೋಕ್ ದೇವಾಡಿಗ ಸ್ವಾಗತಿಸಿ, ಜೆರಲ್ಡ್ ಡಿಸೋಜಾ ಪ್ರಾಸ್ತಾವಿಕ ಭಾಷಣ ಮಾಡಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಮತಾ ಶೆಟ್ಟಿ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಕುಮಾರ್ ನಾಯ್ಕ್ ವಂದಿಸಿದರು.

ಈ ಭವನವನ್ನು ಉಡುಪಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕಾರ್ಕಳ, ಬೆಳ್ಮಣ್ ಗ್ರಾಮ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಿರ್ಮಿಸಲಾಗಿದೆ.