ಸಾರಾಂಶ
ಜಿಲ್ಲಾಡಳಿತ ಭವನದಲ್ಲಿನ ಎರಡನೇ ಮಹಡಿಯಲ್ಲಿರುವ ಮಾಜಿ ಸಂಸದ ಬಿ.ಎನ್. ಬಚ್ಚೇಗೌಡರಿಗೆ ನೀಡಿದ್ದ ಕಚೇರಿಯನ್ನೇ ಡಾ. ಕೆ.ಸುಧಾಕರ್ ಗೆ ನೀಡಿದ್ದು, ಇಂದು ಅಧಿಕೃತವಾಗಿ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಿದರು.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಸಂಸದರ ನೂತನ ಕಚೇರಿಯನ್ನು ಜಿಲ್ಲಾಡಳಿತ ಭವನದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಕಚೇರಿ ಉದ್ಘಾಟನೆ ವೇಳೆ ಹಲವಾರು ಮುಖಂಡರು ಹಾಜರಾಗಿ ಹೂಗುಚ್ಛ ನೀಡಿ, ಶಾಲು ಹೊದಿಸಿ, ಡಾ ಕೆ.ಸುಧಾಕರ್ ಗೆ ಶುಭಕೋರಿದರು.ಜಿಲ್ಲಾಡಳಿತ ಭವನದಲ್ಲಿನ ಎರಡನೇ ಮಹಡಿಯಲ್ಲಿರುವ ಮಾಜಿ ಸಂಸದ ಬಿ.ಎನ್. ಬಚ್ಚೇಗೌಡರಿಗೆ ನೀಡಿದ್ದ ಕಚೇರಿಯನ್ನೇ ಡಾ. ಕೆ.ಸುಧಾಕರ್ ಗೆ ನೀಡಿದ್ದು, ಇಂದು ಅಧಿಕೃತವಾಗಿ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಬಿಜೆಪಿ ಜಿಲ್ಲಾಧ್ಯಕ್ಷ ಡಿ.ವಿ. ರಾಮಲಿಂಗಪ್ಪ,ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್,ಮಾಜಿ ಶಾಸಕರಾದ ಎಂ.ಶಿವಾನಂದ್,ಎಂ.ರಾಜಣ್ಣ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಕ್ತ ಮುನಿಯಪ್ಪ,ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಖಾದಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ಬಿ.ಎಂ.ರಾಮಸ್ವಾಮಿ, ನಗರಸಭಾ ಮಾಜಿ ಅಧ್ಯಕ್ಷ ಆನಂದಬಾಬುರೆಡ್ಡಿ,ಮಂಜುನಾಥ್,ಮುನಿಕೃಷ್ಣ, ಲೀಲಾವತಿ ಶ್ರೀನಿವಾಸ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ನಾರಾಯಣಗೌಡ,ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಪ್ರಭ ನಾರಾಯಣಗೌಡ, ,ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ,ಮುಖಂಡರಾದ ಮರಳಕುಂಟೆ ಕೃಷ್ಣಮೂರ್ತಿ, ವೇಣುಗೋಪಾಲ್, ಮುರಳಿಧರ್,ನರಸಿಂಹಮೂರ್ತಿ,ಅನುಆನಂದ್,ಆರ್.ಎಚ್.ಎನ್.ಅಶೋಕ್, ಎಬಿಕೆ ಬಾಲು,ಪ್ರೇಮಲೀಲಾ ವೆಂಕಟೇಶ್, ಮೊಬೈಲ್ ಬಾಬು, ಕೆ.ಎಂ.ನಾಗರಾಜು, ಅಖಿಲ್ ರೆಡ್ಡಿ ಡಾ. ಕೆ ಸುಧಾಕರ್ ಅಭಿಮಾನಿಗಳು,ಬಿಜೆಪಿ ಜೆಡಿಎಸ್ ಕಾರ್ಯಕರ್ತರು,ಮತ್ತಿತರರು ಹಾಜರಾಗಿ ಹೂ ಗುಚ್ಛ ನೀಡಿ ಶುಭಕೋರಿದರು.