ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಬೌದ್ಧ, ಅಂಬೇಡ್ಕರ್ ಮಹಾದ್ವಾರ, ಭಗವಾನ್ ಗೌತಮ ಬುದ್ಧ, ರಾಜರ್ಷಿ ಕೃಷ್ಣರಾಜ ಒಡೆಯರ್ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಉದ್ಘಾಟನಾ ಸಮಾರಂಭವು ಜ.12ರಂದು ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಡೆಯಲಿದೆ ಎಂದು ಮುಖಂಡ ಚಂದ್ರು ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರಚಾರ ಪತ್ರ ಬಿಡುಗಡೆಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಳ್ಳೇಗಾಲದ ಜೇತವನ ಬುದ್ಧವಿಹಾರ ಮನೋರಕ್ಕಿತ ಬಂತೇಜಿ ಬುದ್ಧ ವಂದನೆ ಸಲ್ಲಿಸಲಿದ್ದು, ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು.
ಸಮಾರಂಭವನ್ನು ಕೇಂದ್ರ ಉಕ್ಕು, ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಹಿಸಲಿದ್ದಾರೆ. ಕಲ್ಕುಣಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಕೆ.ಶಿವಶಂಕರ್ ಅವರ ಕಾರ್ಯಾಧ್ಯಕ್ಷತೆ ಮಾಡಲಿದ್ದಾರೆ ಎಂದರು.ಮುಖ್ಯ ಭಾಷಣಕಾರರಾಗಿ ಅಕ್ಕ ಐಎಎಸ್ ಅಕಾಡೆಮಿ ಮುಖ್ಯಸ್ಥ ಡಾ.ಶಿವಕುಮಾರ್, ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಮೈಸೂರು ಲೋಕಸಭಾ ಸದಸ್ಯ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಯಣ್, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಕಾರ್ಯಪಾಲಕ ಅಭಿಯಂತರ ಕೆ.ಎಂ.ರವಿಕುಮಾರ್, ಬಹುಜನ ಸಮಾಜ ಪಾರ್ಟಿ ಎಂ.ಕೃಷ್ಣಮೂರ್ತಿ, ನಂಜಪ್ಪ, ದೊಡ್ಡಮಾರಯ್ಯ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.
ಮುಖಂಡ ಚಿನ್ನಸ್ವಾಮಿ ಮಾತನಾಡಿ, ಕಲ್ಕುಣಿ ಗ್ರಾಮದಲ್ಲಿ ಎಲ್ಲ ಸಮುದಾಯ ಜನರು ವಾಸವಿದ್ದು, ಎಲ್ಲರೂ ಜಾತ್ಯತೀತವಾಗಿ ಜನಪರ ಚಟುವಟಿಕೆಗಳು ನಡೆಸಿಕೊಂಡು ಬರಲಾಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಎಲ್ಲರ ಸಹಕಾರ ಪಡೆದು ಬೌದ್ಧ ಅಂಬೇಡ್ಕರ್ ಮಹಾದ್ವಾರ, ಭಗವಾನ್ ಗೌತಮ ಬುದ್ಧರ, ರಾಜರ್ಷಿ ಕೃಷ್ಣರಾಜ ಒಡೆಯರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡಲಾಗಿದೆ ಎಂದರು.ಪುರಸಭೆ ಸದಸ್ಯ ಸಿದ್ದರಾಜು, ಮುಖಂಡರಾದ ಕೆ.ಎಂ.ನಂಜುಂಡಸ್ವಾಮಿ, ಎಂ.ಎನ್.ಜಯರಾಜು, ನಂಜುಂಡಸ್ವಾಮಿ ಮಾತನಾಡಿ, ಮಹಾನೀಯರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರಿಗೂ ತಿಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಾಮಾಜಿಕ ಮುಖಿ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಸಮುದಾಯಗಳ, ಪಕ್ಷಗಳ ಮುಖಂಡರು ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಪಾಲ್ಗೋಳ್ಳಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಹದೇವಸ್ವಾಮಿ, ಸುರೇಶ, ಮಲ್ಲು, ಶ್ರೀನಿವಾಸ್, ಪ್ರಕಾಶ್, ಮಲ್ಲೇಶ, ಟಿ.ಎಲ್.ನಾಗರಾಜು, ಯತೀಶ, ಮಾದೇವ, ಸುರೇಶ, ಸಂದೇಶ, ಅಶೋಕ, ನಾಗರಾಜು ಸೇರಿದಂತೆ ಇತರರು ಇದ್ದರು.