ಎಂಜಿನಿಯರಿಂಗ್‌, ವೈದ್ಯಕೀಯ ಹಾಸ್ಟೆಲ್‌ ಉದ್ಘಾಟನೆ

| Published : Aug 22 2024, 12:50 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರ ವ್ಯಾಪ್ತಿಯ ಕರಾಡದೊಡ್ಡಿಯಲ್ಲಿ ನೂತನವಾಗಿ ನಿರ್ಮಿಸಿದ್ದ ಮೆಟ್ರಿಕ್ ನಂತರದ ಎಂಜನಿಯರಿಂಗ್ ಮತ್ತು ವೈದ್ಯಕೀಯ ಬಾಲಕರ ವಿದ್ಯಾರ್ಥಿ ನಿಲಯವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ₹ 2 ಕೋಟಿ ಅನುದಾನದಲ್ಲಿ ಅತ್ಯುತ್ತಮವಾದ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರ ವ್ಯಾಪ್ತಿಯ ಕರಾಡದೊಡ್ಡಿಯಲ್ಲಿ ನೂತನವಾಗಿ ನಿರ್ಮಿಸಿದ್ದ ಮೆಟ್ರಿಕ್ ನಂತರದ ಎಂಜನಿಯರಿಂಗ್ ಮತ್ತು ವೈದ್ಯಕೀಯ ಬಾಲಕರ ವಿದ್ಯಾರ್ಥಿ ನಿಲಯವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ₹ 2 ಕೋಟಿ ಅನುದಾನದಲ್ಲಿ ಅತ್ಯುತ್ತಮವಾದ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ವಾಸ ಮಾಡುವ ವಿದ್ಯಾರ್ಥಿಗಳು ಸ್ವಚ್ಛ ಹಾಗೂ ಹಾಳಾಗದಂತೆ ಉತ್ತಮವಾಗಿ ಉಪಯೋಗಿಸಿಕೊಳ್ಳಬೇಕು. ನಿಮ್ಮಂತೆ ಮುಂದೆ ಬರುವ ಬಡ ಮಕ್ಕಳಿಗೂ ಅನುಕೂಲ ಆಗಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಸರಿಯಾಗಿ ನಿರ್ವಹಣೆ ಮಾಡುವಂತೆ ಸೂಚಿಸಿದರು.

ಈ ವೇಳೆ ಸಾರ್ವಜನಿಕರ ಅಹವಾಲು ಆಲಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಪ್ಪ ಆಶಾಪೂರ ಸೇರಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.