ಪ್ರಥಮ ಚಿಕಿತ್ಸೆಯ ಕುರಿತಾದ ಅರಿವು ಸಂಕಷ್ಟದ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮತ್ತು ಇತರರು ಕಷ್ಟದಲ್ಲಿದ್ದಾಗ ಸಹಾಯ ಮಾಡಲು ಸಹಕಾರಿಯಾಗುತ್ತದೆ. ಇದರಿಂದ ಪ್ರಥಮ ಚಿಕಿತ್ಸೆಯ ಪ್ರಾಥಮಿಕ ಅರಿವು ಎಲ್ಲರಿಗೂ ಮುಖ್ಯ ಎಂದು ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.
ಉಡುಪಿ : ಪ್ರಥಮ ಚಿಕಿತ್ಸೆಯ ಕುರಿತಾದ ಅರಿವು ಸಂಕಷ್ಟದ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮತ್ತು ಇತರರು ಕಷ್ಟದಲ್ಲಿದ್ದಾಗ ಸಹಾಯ ಮಾಡಲು ಸಹಕಾರಿಯಾಗುತ್ತದೆ. ಇದರಿಂದ ಪ್ರಥಮ ಚಿಕಿತ್ಸೆಯ ಪ್ರಾಥಮಿಕ ಅರಿವು ಎಲ್ಲರಿಗೂ ಮುಖ್ಯ ಎಂದು ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.
ಅವರು ಉಡುಪಿಯ ವಿದ್ಯಾರತ್ನ ನರ್ಸಿಂಗ್ ಕಾಲೇಜಿನಲ್ಲಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಮತ್ತು ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲೆ ಅನಿತಾ ಸಿ. ರಾವ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನರ್ಸಿಂಗ್ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕಿ ಪ್ರೀತಿ ಫೆರ್ನಾಂಡಿಸ್ ಸ್ವಾಗತಿಸಿದರು. ಉಪಪ್ರಾಂಶುಪಾಲ ಡಾ. ರಮೇಶ್ ಎಂ. ಕೆ., ಆಡಳಿತಾಧಿಕಾರಿ ಡಾ. ರವಿ ಪಾಲನ್, ಸಿಟಿ ಆಸ್ಪತ್ರೆಯ ನರ್ಸಿಂಗ್ ಸುಪರಿಟೆಂಟ್ ಮರಿಯಾ ಆಳ್ವ ಉಪಸ್ಥಿತರಿದ್ದರು. ಮೆರಿಟಾ ಮೆಂಡೋನ್ಸಾ ವಂದಿಸಿದರು.
ಡಾ. ಎ.ವಿ. ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಹಾಗೂ ಮೂಳೆ ತಜ್ಞರಾದ ಡಾ. ಸುರೇಶ್ ಶೆಣೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಾಲಿನಿ ಮೆರಿಟ ಕುಂದರ್ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಹಕರಿಸಿದರು.