ಜೆಎಸ್‌ಎಸ್ ಅರ್ಬನ್ ಹಾತ್‌ ನಲ್ಲಿ ಗಾಂಧಿ ಶಿಲ್ಪ ಬಜಾರ್ ಉದ್ಘಾಟನೆ

| Published : Aug 03 2024, 12:35 AM IST

ಸಾರಾಂಶ

ಈ ಪ್ರದರ್ಶನದಲ್ಲಿ ಮರದ ಕೆತ್ತನೆ, ಶಿಲಾ ಶಿಲ್ಪ, ಕಂಚಿನ ವಿಗ್ರಹಗಳು, ಮರದ ಕುಂದಣ ಕಲೆ, ಮಣ್ಣಿನ ಮಡಿಕೆಗಳು,

ಕನ್ನಡಪ್ರಭ ವಾರ್ತೆ ಮೈಸೂರು

ಹೆಬ್ಬಾಳು ಕೈಗಾರಿಕಾ ಪ್ರದೇಶದ ಹೊರ ವರ್ತುಲ ರಸ್ತೆಯಲ್ಲಿರುವ ಜೆಎಸ್ಎುಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಆಯೋಜಿಸಲಾಗಿರುವ ಗಾಂಧಿ ಶಿಲ್ಪ ಬಜಾರ್- ಕರಕುಶಲ, ಕೈಮಗ್ಗ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟವನ್ನು ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಶುಕ್ರವಾರ ಉದ್ಘಾಟಿಸುವರು.

ಈ ಪ್ರದರ್ಶನದಲ್ಲಿ ಮರದ ಕೆತ್ತನೆ, ಶಿಲಾ ಶಿಲ್ಪ, ಕಂಚಿನ ವಿಗ್ರಹಗಳು, ಮರದ ಕುಂದಣ ಕಲೆ, ಮಣ್ಣಿನ ಮಡಿಕೆಗಳು, ಪೇಪರ್, ರತ್ನಗಂಬಳಿ, ಹತ್ತಿ ಜಮಕಾನ, ಇಮಿಟೇಶನ್ ಆಭರಣಗಳು, ಮರದ ಅರಗಿನ ಕಲಾವಸ್ತುಗಳು, ಬಾಟಿಕ್, ಕಲಾಂಕಾರಿ ಚಿತ್ರಕಲೆ, ಚರ್ಮದ ಆಕರ್ಷಕ ವಸ್ತುಗಳು ಒಂದೇ ಸೂರಿನಡಿ ಲಭ್ಯವಿದೆ. ಈ ಪ್ರದರ್ಶನ ಮತ್ತು ಮಾರಾಟವು ಆ.8 ರವರೆಗೆ ಪ್ರತಿದಿನ ಬೆಳಗ್ಗೆ 10.30 ರಿಂದ ರಾತ್ರಿ 9 ರವರೆಗೆ ಇರಲಿದ್ದು, ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ.

ವಿಶ್ವೇಶ್ವರಯ್ಯ ಟ್ರೇಡ್ ಪ್ರಮೋಷನ್ ಸೆಂಟರ್ ನಿರ್ದೇಶಕ ಬಿ.ಕೆ. ಶಿವಪ್ರಕಾಶ್, ಜವಳಿ ಮಂತ್ರಾಲಯದ ಕರಕುಶಲ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಕೆ.ಎಸ್. ಸುನಿಲ್ ಕುಮಾರ್, ಜೆಎಸ್‌ಎಸ್‌ ಮಹಾವಿದ್ಯಾಪೀಠ ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕ ಶಂಕರಪ್ಪ, ಪ್ರಕಟಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ, ಸಾಮಾನ್ಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಕೆ.ಎಲ್. ರೇವಣ್ಣಸ್ವಾಮಿ, ಶಾಲಾ ಶಿಕ್ಷಣ ವಿಭಾಗದ ನಿರ್ದೇಶಕ ರಾಜಶೇಖರ್, ಜೆಎಸ್ಎಸ್ ಅರ್ಬನ್ ಹಾತ್ ಸಂಯೋಜಕ ಎಂ. ಶಿವನಂಜಸ್ವಾಮಿ, ರಾಕೇಶ್ ರೈ ಮೊದಲಾದವರು ಇದ್ದರು.